ಅಪ್ರಾಪ್ತರ ಮೇಲೆ ಅತ್ಯಾಚಾರ ನಡೆಸುವ ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆ ವಿಧಿಸಲು ಪೋಸ್ಕೋ ಕಾಯ್ದೆಗೆ ತಿದ್ದುಪಡಿ ತರುವ ಸುಗ್ರೀವಾಜ್ಞೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿರುವ ಬೆನ್ನಲ್ಲೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಈ ಪ್ರಶ್ನೆ ಕೇಳಿದೆ. ಅತ್ಯಾಚಾರ ಅಪರಾಧಿಗಳಿಗೆ ಕನಿಷ್ಠ 7 ವರ್ಷಗಳ ಜೈಲು ಶಿಕ್ಷೆ ವಿಧಿಸುವುದಕ್ಕೆ ಸಂಬಂಧಿಸಿದಂತೆ ಪಿಐಎಲ್ ವಿಚಾರಣೆ ನಡೆಸುತ್ತಿದ್ದ ಕೋರ್ಟ್ " ಮರಣ ದಂಡನೆ ವಿಧಿಸುವುದರಿಂದ ಅತ್ಯಾಚಾರಗಳನ್ನು ತಡೆಗಟ್ಟಬಹುದೆಂಬ ಬಗ್ಗೆ ಅಧ್ಯಯನ ನಡೆಸಲಾಗಿದೆಯೇ? ಯಾವುದಾದರೂ ವೈಜ್ಞಾನಿಕ ಅಂದಾಜು ಇದೆಯೇ ಎಂದು ಪ್ರಶ್ನಿಸಿದೆ.