ಅತ್ಯಾಚಾರಕ್ಕೆ ವಿರೋಧ, ಕಾಮುಕರಿಂದ ಮಹಿಳೆ ಮೇಲೆ ಕಬ್ಬಿಣದ ರಾಡ್ ನಿಂದ ದಾಳಿ

ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯೊಬ್ಬರ ಮೇಲೆ ಕಾಮುಕರು ಕಬ್ಬಿಣದ ರಾಡ್ ನಿಂದ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮುಜಾಫರ್ ನಗರ: ಅತ್ಯಾಚಾರಕ್ಕೆ ವಿರೋಧ ವ್ಯಕ್ತಪಡಿಸಿದ ಮಹಿಳೆಯೊಬ್ಬರ ಮೇಲೆ ಕಾಮುಕರು ಕಬ್ಬಿಣದ ರಾಡ್ ನಿಂದ ದಾಳಿ ನಡೆಸಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. 
ಮುಜಾಫರ್ ನಗರದಲ್ಲಿ ಪತಿ ಹೊರಗೆ ಹೋಗಿದ್ದರಿಂದಾಗಿ ಮನೆಯಲ್ಲಿ ಮಹಿಳೆಯೊಬ್ಬರೇ ಒಬ್ಬಂಟಿಯಾಗಿ ಮನೆಯಲ್ಲಿದ್ದರು. ಇದನ್ನೇ ತಮ್ಮ ದುಷ್ಕೃತ್ಯಕ್ಕೆ ಬಳಿಸಿಕೊಂಡ ಕಾಮುಕರು ಮನೆಗೆ ನುಗ್ಗಿ ಅತ್ಯಾಚಾರಕ್ಕೆ ಯತ್ನ ನಡೆಸಿದ್ದಾರೆ. ಆದರೆ ಮಹಿಳೆ ವಿರೋಧ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಕಬ್ಬಿಣದ ರಾಡ್ ನಿಂದ ಆಕೆಯ ಮೇಲೆ ಹಲ್ಲೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ. 
ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಉತ್ತರಪ್ರದೇಶ ಪೊಲೀಸರು ತನಿಖೆ ಆರಂಭಿಸಿದ್ದಾರೆ. 
ಇನ್ನು ಸುಜ್ರು ಎಂಬ ಗ್ರಾಮದಲ್ಲಿಯೂ ಇಂತಹುದೇ ಘಟನೆ ನಡೆದಿದ್ದು, ಹಳೇ ದ್ವೇಷದ ಹಿನ್ನಲೆಯಲ್ಲಿ ಮೂವರು ಮಹಿಳೆಯರ ಮೇಲೆ ನಾಲ್ವರು ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. 
ಘಟನೆಯಲ್ಲಿ ಮಹಿಳೆಯರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧನಕ್ಕೊಳಪಡಿಸಿರುವ ಪೊಲೀಸರು ಉಳಿದ ಆರೋಪಿಗಳಿಗಾಗಿ ತೀವ್ರ ಹುಡುಕಾಟ ಆರಂಭಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com