ಗ್ರಾಮ ಸ್ವರಾಜ್ಯ ಯೋಜನೆಯ ಅಡಿಯಲ್ಲಿ ಉತ್ತರ ಪ್ರದೇಶ ರಾಜ್ಯ ಸರ್ಕಾರ 50,000 ಗ್ರಾಮಗಳನ್ನು ತಲುಪುವ ಉದ್ದೇಶ ಹೊಂದಿದೆ. ಯೋಜನೆಯ ಭಾಗವಾಗಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸುತ್ತಿದ್ದ ವೇಳೆ ಯೋಗಿ ಆದಿತ್ಯನಾಥ್ ಗ್ರಾಮಸ್ಥರನ್ನು ಇಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಗಿದೆಯೇ ಎಂದು ಪ್ರಶ್ನಿಸಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಸಂವಾದ ನಡೆಸುತ್ತಿದ್ದ ಗ್ರಾಮಸ್ಥರು ಒಕ್ಕೊರಲಿನಿಂದ ಇಲ್ಲ, ಒಂದೇ ಒಂದೂ ನಿರ್ಮಾಣವಾಗಿಲ್ಲ ಎಂದು ಜೋರಾಗಿ ಹೇಳಿದ್ದಾರೆ.