ಬಿಜೆಪಿ ಶಾಸಕರು, ಸಂಸದರಿಂದಲೇ ಹೆಚ್ಚು ಪ್ರಚೋದನಕಾರಿ ಭಾಷಣ: ಎಡಿಆರ್

ಬಿಜೆಪಿ ದೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಅತಿ ಹೆಚ್ಚು ಶಾಸಕರು ಮತ್ತು ಸಂಸದರನ್ನು ಹೊಂದಿದೆ ಎಂದು ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಬಿಜೆಪಿ ದೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಅತಿ ಹೆಚ್ಚು ಶಾಸಕರು ಮತ್ತು ಸಂಸದರನ್ನು ಹೊಂದಿದೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರೆಟಿಕ್ ರಿಫಾರ್ಮ್ಸ್(ಎಡಿಆರ್) ವರದಿ ತಿಳಿಸಿದೆ.
ಎಡಿಆರ್ ಇಂದು ಬಿಡುಗಡೆ ಮಾಡಿರುವ ವರದಿ ಪ್ರಕಾರ, ದೇಶದಲ್ಲಿ ಒಟ್ಟು 59 ಸಂಸದರು ಮತ್ತು ಶಾಸಕರ ವಿರುದ್ಧ ಪ್ರಚೋದನಕಾರಿ ಭಾಷಣ ಮಾಡಿದ ಪ್ರಕರಣ ದಾಖಲಾಗಿದ್ದು, ಈ ಪೈಕಿ ಬಿಜೆಪಿಯ 27 ಶಾಸಕರು ಮತ್ತು ಸಂಸದರಿದ್ದಾರೆ.
ಕಳೆದ ಚುನಾವಣೆಯಲ್ಲಿ ಶಾಸಕರು ಮತ್ತು ಸಂಸದರು ಸಲ್ಲಿಸಿದ ಅಫಿಡವಿಟ್ ಆಧಾರದ ಮೇಲೆ ಎಡಿಆರ್ ಮತ್ತು ನ್ಯಾಷನಲ್ ಎಲೆಕ್ಷನ್ ವಾಚ್(ಎನ್ ಇಡಬ್ಲ್ಯೂ) ಜಂಟಿಯಾಗಿ ಈ ಸಮೀಕ್ಷೆ ನಡೆಸಿವೆ.
ಭಾರತದಲ್ಲಿ ಪ್ರಚೋದನಕಾರಿ ಭಾಷಣ ಕಾನೂನಿಗೆ ವಿರುದ್ಧವಾಗಿದ್ದು, ಮತ್ತೊಬ್ಬರನ್ನು ನಿಂದಿಸುವ, ಬೆದರಿಸುವ ಅಥವಾ ಹಿಂಸೆಗೆ ಪ್ರಚೋದನೆ ನೀಡುವಂತೆ ಮಾತನಾಡುವಂತಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com