ಹೈಕೋರ್ಟ್ ನ್ಯಾಯಾಧೀಶ ಕೆಎಂ ಜೋಸೆಫ್ ಅವರನ್ನು ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರನ್ನಾಗಿ ನೇಮಕ ಮಾಡುವ ಶಿಫಾರಸ್ಸನ್ನು ಕೇಂದ್ರ ಸರ್ಕಾರ ತಿರಸ್ಕರಿಸಿದ ಬೆಳವಣಿಗೆ ಬೆನ್ನಲ್ಲೇ ಕೇಜ್ರಿವಾಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ದೆಹಲಿ ಸರ್ಕಾರವನ್ನು ನಡೆಸಿಕೊಂಡ ರೀತಿಯಲ್ಲೇ ನ್ಯಾಯಾಂಗವನ್ನೂ ನಡೆಸಿಕೊಳ್ಳಲಾಗುತ್ತಿದೆ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.