ರಾಜೀವ್ ಗಾಂಧಿ ಹತ್ಯೆ ಪ್ರಕರಣ: ನಳಿನಿ ಮನವಿ ಅರ್ಜಿಯನ್ನು ತಿರಸ್ಕರಿಸಿದ ಮದ್ರಾಸ್ ಹೈಕೋರ್ಟ್

ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆಯ ಆರೋಪಿ ನಳಿನಿ ಶ್ರೀಹರನ್ ಬಿಡುಗಡೆಗೆ ...
ರಾಜೀವ್ ಗಾಂಧಿ ಹತ್ಯೆಯ ಪ್ರಮುಖ ಆರೋಪಿ ನಳಿನಿ
ರಾಜೀವ್ ಗಾಂಧಿ ಹತ್ಯೆಯ ಪ್ರಮುಖ ಆರೋಪಿ ನಳಿನಿ

ಚೆನ್ನೈ: ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿ ಹತ್ಯೆಯ ಆರೋಪಿ ನಳಿನಿ ಶ್ರೀಹರನ್ ಬಿಡುಗಡೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ತಿರಸ್ಕರಿಸಿದೆ.

ಸುಪ್ರೀಂ ಕೋರ್ಟ್ ನಲ್ಲಿ ಕೂಡ ಇಂತಹದ್ದೇ ಕೇಸು ಬಾಕಿ ಇರುವುದರಿಂದ ನಳಿನಿ ಶ್ರೀಹರನ್ ಮನವಿಯನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಗೆ ತಮಿಳುನಾಡು ಸರ್ಕಾರ ಕಳೆದ ನವೆಂಬರ್ ನಲ್ಲಿ ತಿಳಿಸಿತ್ತು. ಸರ್ಕಾರದ ಗೃಹ ಇಲಾಖೆಯ ಉಪ ಕಾರ್ಯದರ್ಶಿ ನಳಿನಿ ಸಲ್ಲಿಸಿದ ಮನವಿಗೆ ಮರು ಅಫಿದವಿಟ್ಟನ್ನು ಸಲ್ಲಿಸಿದೆ.

ನಳಿನಿ ಮದ್ರಾಸ್ ಹೈಕೋರ್ಟ್ ನಲ್ಲಿ ಸಲ್ಲಿಸಿರುವ ಅರ್ಜಿಗೆ ನ್ಯಾಯಮೂರ್ತಿ ರಾಜೀವ್ ಶಕ್ದೇರ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಬಾಕಿಯಿರುವ ಹೆಬಿಯಸ್ ಕಾರ್ಪಸ್ ಅರ್ಜಿಗೆ ಪ್ರತಿಕ್ರಿಯೆಯಾಗಿ ಸರ್ಕಾರ, ರಾಜೀವ್ ಗಾಂಧಿ ಹತ್ಯೆ ಕೇಸಿನಲ್ಲಿ ಎಲ್ಲಾ ಏಳು ಮಂದಿ ಆರೋಪಿಗಳಿಗೆ ಶಿಕ್ಷೆಯ ಪ್ರಮಾಣವನ್ನು ಕಡಿಮೆ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಸಿರುವ ಮನವಿಗೆ ನಳಿನಿ ಪ್ರತಿವಾದಿಯಾಗಿದ್ದಾರೆ ಎಂದು ಹೇಳಿದೆ.

ಆರಂಭದಲ್ಲಿ ಸುಪ್ರೀಂ ಕೋರ್ಟ್ ನಳಿನಿಗೆ ಮರಣದಂಡನೆ ಶಿಕ್ಷೆ ವಿಧಿಸಿತ್ತು. ತಮಿಳುನಾಡು ಸರ್ಕಾರ ಸಂವಿಧಾನ ವಿಧಿ 161ರಡಿಯಲ್ಲಿ 2000ನೇ ಇಸವಿ ಏಪ್ರಿಲ್ 24ರಂದು ಜೀವಾವಧಿ ಶಿಕ್ಷೆಗೆ ತಗ್ಗಿಸಿತ್ತು.

ಈ ಮಧ್ಯೆ ಕಳೆದ ತಿಂಗಳು ಸಿಂಗಾಪುರದಲ್ಲಿ ಮಾತನಾಡಿದ್ದ ರಾಹುಲ್ ಗಾಂಧಿ, ತಾನು ಮತ್ತು ಸಹೋದರಿ ಪ್ರಿಯಾಂಕಾ ಗಾಂಧಿ, ತಮ್ಮ ತಂದೆಯನ್ನು ಹತ್ಯೆ ಮಾಡಿದವರನ್ನು ದ್ವೇಷಿಸುವುದು ಕಷ್ಟವಾದುದರಿಂದ ಸಂಪೂರ್ಣವಾಗಿ ಕ್ಷಮಿಸುವುದಾಗಿ ಹೇಳಿಕೆ ನೀಡಿದ್ದರು.

ರಾಜೀವ್ ಗಾಂಧಿ 1991ರ ಮೇ 21ರಂದು ತಮಿಳುನಾಡಿನ ಶ್ರೀಪೆರುಂಬದೂರಿನಲ್ಲಿ ಆತ್ಮಹತ್ಯಾ ಬಾಂಬ್ ದಾಳಿಯಲ್ಲಿ ಹತ್ಯೆಗೀಡಾಗಿದ್ದರು. ಮುರುಗನ್, ಸಂತನ್, ಪೆರಾರಿವಾಲನ್, ನಳಿನಿ, ರಾಬರ್ಟ್ ಪಾಯಸ್, ಜಯಕುಮಾರ್ ಮತ್ತು ರವಿಚಂದ್ರನ್ ಹತ್ಯೆಯ ಆರೋಪಿಗಳಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com