ಜಮ್ಮು-ಕಾಶ್ಮೀರದ ಉಗ್ರ ಸಂಘಟನೆಗಳಿಗೆ ಬೆಂಬಲಿಸುವುದನ್ನು ನಿಲ್ಲಿಸಿ: ಪಾಕ್'ಗೆ ಭಾರತ

ಉಗ್ರ ಸಂಘಟನೆಗಳಿಗೆ ಬೆಂಬಲ ನೀಡಿ ಪದೇ ಪದೇ ಜಮ್ಮು ಮತ್ತು ಕಾಶ್ಮೀರದಲ್ಲಿ ಅಶಾಂತಿ ಸೃಷ್ಟಿಸುತ್ತಿರುವ ಪಾಕಿಸ್ತಾನಕ್ಕೆ ಭಾರತ ಶುಕ್ರವಾರ ಎಚ್ಚರಿಕೆ ನೀಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ನೀಡಲಾಗುತ್ತಿರುವ ಬೆಂಬಲಗಳನ್ನು ಮೊದಲು ನಿಲ್ಲಿಸಿ ಎಂದು ಪಾಕಿಸ್ತಾನಕ್ಕೆ ಭಾರತ ಶುಕ್ರವಾರ ಹೇಳಿದೆ. 
ಪಾಕಿಸ್ತಾನ ಸೇನಾಧಿಕಾರಿಗಳೊಂದಿಗೆ ಭಾರತೀಯ ಸೇನಾ ಕಾರ್ಯಾಚರಣೆಗಳ ಮಹಾ ನಿರ್ದೇಶಕ (ಡಿಜಿಎಂಒ) ಲೆ.ಜ.ಅನಿಲ್ ಚೌಹಾಣ್ ಅವರು ನಿನ್ನೆಯಷ್ಟೇ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದಾರೆಂದು ತಿಳಿದುಬಂದಿದೆ. 
ಮಾತುಕತೆ ವೇಳೆ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿರುವ ಭಾರತ, ಭಾರತದ ವಿರುದ್ಧ ರಚಿಸಲಾಗುತ್ತಿರುವ ಷಡ್ಯಂತ್ರಗಳಿಗೆ ದಿಟ್ಟ ಉತ್ತರ ನೀಡಲು ಈಗಾಗಲೇ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ನೀಡಲಾಗುತ್ತಿರುವ ಬೆಂಬಲವನ್ನು ಮೊದಲು ನಿಲ್ಲಿಸಿ ಎಂದು ಹೇಳಿದ್ದಾರೆಂದು ತಿಳಿದುಬಂದಿದೆ. 
ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆ ಬಳಿ ಅಶಾಂತಿ ಸೃಷ್ಟಿಯಾಗಿದ್ದು, ಕೂಡಲೇ ಪಾಕಿಸ್ತಾನ ಇದನ್ನು ನಿಲ್ಲಿಸಬೇಕೆಂದು ಹೇಳಿದ್ದಾರೆ.

ಇದೇ ವೇಳೆ ಭಾರತದ ವಿರುದ್ಧ ಆರೋಪ ಮಾಡಿರುವ ಪಾಕಿಸ್ತಾನ, ಗಡಿ ನಿಯಂತ್ರಣ ರೇಖೆ ಬಳಿ ಭಾರತವೇ ಪಾಕಿಸ್ತಾನದ ಮೇಲೆ ಅಪ್ರಚೋದಿತ ಗುಂಡಿನ ದಾಳಿ ನಡೆಸುತ್ತಿದೆ ಎಂದು ಹೇಳಿಕೊಂಡಿದೆ ಎಂದು ತಿಳಿದುಬಂದಿದೆ. 

ಬಳಿಕ ಮಾತನಾಡಿರುವ ಭಾರತೀಯ ಸೇನಾಧಿಕಾರಿಗಳು, ಪಾಕಿಸ್ತಾನ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಯುತ್ತಿದ್ದು, ಭಾರತೀಯ ಸೇನೆ ಇದಕ್ಕೆ ದಿಟ್ಟ ಉತ್ತರವನ್ನಷ್ಟೇ ನೀಡುತ್ತಿದೆ. ಸೇನೆ ತಾನಾಗಿಯೇ ಎಂದೂ ಗುಂಡು ಹಾರಿಸಿಲ್ಲ ಎಂದು ಉತ್ತರಿಸಿದ್ದಾರೆ. ಅಲ್ಲದೆ, ಕಾಶ್ಮೀರದಲ್ಲಿ ಉಗ್ರ ಸಂಘಟನೆಗಳಿಗೆ ಬೆಂಬಲ ನೀಡುವುದನ್ನು ಸಹಿಸಲು ಸಾಧ್ಯವಿಲ್ಲ. ಭಾರತೀಯ ಸೇನೆ ಇದಕ್ಕೆ ದಿಟ್ಟ ಉತ್ತರ ನೀಡುವುದನ್ನು ಹೀಗೆಯೇ ಮುಂದುವರೆಸಲಿದೆ. ಪಾಕಿಸ್ತಾನ ಮೊದಲು ಉಗ್ರ ಸಂಘಟನೆಗಳಿಗೆ ನೀಡಲಾಗುತ್ತಿರುವ ಬೆಂಬಲ ಹಾಗೂ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕೆಂದು ಎಚ್ಚರಿಸಿದ್ದಾರೆಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com