ಬಳಿಕ ಮಾತನಾಡಿರುವ ಸೋನಿಯಾ ಗಾಂಧಿಯವರು, ಅಧಿಕಾರಕ್ಕೆ ಬರುವಾಗ ಮೋದಿಯವರು 'ನಾ ಖಾವೂಂಗಾ ನಾ ಖಾನೆ ದೂಂಗಾ' (ನಾನು ತಿನ್ನುವುದಿಲ್ಲ, ತಿನ್ನುವುದಕ್ಕೂ ಬಿಡುವುದಿಲ್ಲ) ಎಂದು ಹೇಳುತ್ತಿದ್ದರು. ಆದರೆ, ದೇಶದಲ್ಲಿಂದು ಭ್ರಷ್ಟಾಚಾರ ಹೆಚ್ಚಾಗಿದೆ. ಇಂದು ದೇಶದಲ್ಲಿ ಅಸತ್ಯ ಹಾಗೂ ಅನ್ಯಾಯ ತಾಂಡವವಾಡುತ್ತಿದೆ. ಇವುಗಳ ವಿರುದ್ಧ ದನಿಯೆತ್ತುವವರು ಮೋದಿ ಸರ್ಕಾರ ಕೋಪಕ್ಕೆ ಗುರಿಯಾಗಬೇಕಿದೆ ಎಂದು ತಿಳಿಸಿದ್ದಾರೆ.
ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಮಾತನಾಡಿ, ಆಡಳಿತಾರೂಢ ಎನ್ ಡಿಎ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ಒಗ್ಗೂಡಿ ಅವಿಶ್ವಾಸ ನಿರ್ಣಯ ಮಂಡಿಸಲು ಮುಂದಾಗಿತ್ತು. ಆದರೆ, ಸರ್ಕಾರ ಅದಕ್ಕೆ ಅವಕಾಶ ಮಾಡಿಕೊಡದೆ ಹತ್ತಿಕ್ಕುವ ಪ್ರಯತ್ನ ಮಾಡಿತು. ಸಂವಿಧಾನಕ್ಕೆ ಪ್ರಜಾಪ್ರಭುತ್ವ ಉಡುಗೊರೆಯಾಗಿದೆ. ಅದನ್ನು ಸಂರಕ್ಷಿಸಲು ನಾವೆಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕಿದೆ ಎಂದಿದ್ದಾರೆ.