ಕಥುವಾ ಅತ್ಯಾಚಾರ ಸಣ್ಣ ಘಟನೆ, ಹೆಚ್ಚು ಮಹತ್ವ ಕೊಡಬೇಡಿ: ಜಮ್ಮು-ಕಾಶ್ಮೀರ ಉಪಮುಖ್ಯಮಂತ್ರಿ ವಿವಾದಾತ್ಮಕ ಹೇಳಿಕೆ
ಏ.30 ರಂದು ಜಮ್ಮು-ಕಾಶ್ಮೀರ ಸಚಿವ ಸಂಪುಟ ಪುನಾರಚನೆಯಾಗಿದ್ದು, ಸಂಪುಟ ಪುನಾರಚನೆ ಬೆನ್ನಲ್ಲೇ ಜಮ್ಮು-ಕಾಶ್ಮೀರ ಉಪಮುಖ್ಯಮಂತ್ರಿ ಕವಿಂದರ್ ಗುಪ್ತ ಕಥುವಾ ಅತ್ಯಾಚಾರ ಪ್ರಕರಣವನ್ನು ಸಣ್ಣ ಘಟನೆ
ಶ್ರೀನಗರ: ಏ.30 ರಂದು ಜಮ್ಮು-ಕಾಶ್ಮೀರ ಸಚಿವ ಸಂಪುಟ ಪುನಾರಚನೆಯಾಗಿದ್ದು, ಸಂಪುಟ ಪುನಾರಚನೆ ಬೆನ್ನಲ್ಲೇ ಜಮ್ಮು-ಕಾಶ್ಮೀರ ಉಪಮುಖ್ಯಮಂತ್ರಿ ಕವಿಂದರ್ ಗುಪ್ತ ಕಥುವಾ ಅತ್ಯಾಚಾರ ಪ್ರಕರಣವನ್ನು ಸಣ್ಣ ಘಟನೆ ಎಂದು ಹೇಳಿದ್ದಾರೆ.
ಕಥುವಾ ಘಟನೆ ಸಣ್ಣ ಘಟನೆ, ಈ ರೀತಿಯ ಘಟನೆಗಳು ನಡೆಯಬಾರದು, ಕಥುವಾ ಅತ್ಯಾಚಾರ ಪ್ರಕರಣದ ಸಂತ್ರಸ್ತೆಗೂ ನ್ಯಾಯ ಸಿಗಬೇಕು ಎಂದು ಹೇಳಿದ್ದಾರೆ, ಸರ್ಕಾರ ಈ ರೀತಿಯ ಅನೇಕ ಸವಾಲುಗಳನ್ನು ಎದುರಿಸುತ್ತಿದೆ, ಈ ರೀತಿಯ ಘಟನೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಬಾರದು ಎಂದು ಹೇಳಿದ್ದಾರೆ.
ಉಪಮುಖ್ಯಮಂತ್ರಿ ಹೇಳಿಕೆಗೆ ತೀವ್ರ ಖಂಡನೆ ವ್ಯಕ್ತವಾಗುತ್ತಿದೆ. ನಿರ್ಮಲ್ ಸಿಂಗ್ ಅವರನ್ನು ಉಪಮುಖ್ಯಮಂತ್ರಿ ಹುದ್ದೆಯಿಂದ ಕೈಬಿಟ್ಟಿ ಕವಿಂದರ್ ಗುಪ್ತ ಅವರನ್ನು ಉಪಮುಖ್ಯಮಂತ್ರಿಯನ್ನಾಗಿ ಮಾಡಲಾಗಿದೆ.