ಜಮ್ಮು ಮತ್ತು ಕಾಶ್ಮೀರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ನಿರ್ಮಲ್ ಸಿಂಗ್ ರಾಜಿನಾಮೆ

ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ನಿರ್ಮಲ್ ಸಿಂಗ್ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಉಪಮುಖ್ಯಮಂತ್ರಿ ಸ್ಥಾನಕ್ಕೆ ಬಿಜೆಪಿ ನಿರ್ಮಲ್ ಸಿಂಗ್ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರ ಸಿಎಂ ಮುಫ್ತಿ ಮೆಹಬೂಬ ಅವರ ತಮ್ಮ ಸಂಪುಟ ಪುನಾರಚನೆ ಮಾಡುತ್ತಿರುವ ಹಿನ್ನಲೆಯಲ್ಲಿ ನಿರ್ಮಲ್ ಸಿಂಗ್ ಅವರು ತಮ್ಮ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಏಪ್ರಿಲ್ 4, 2016 ರಂದು ಅವರು ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು. ಇನ್ನು ಅವರ ರಾಜಿನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಬಿಜೆಪಿ ಮುಖಂಡ ಕವಿಂದರ್ ಗುಪ್ತಾ ಅವರು ಆಯ್ಕೆಯಾಗಿದ್ದು,  ಶೀಘ್ರ ಉಪಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.
ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಜಮ್ಮು-ಕಾಶ್ಮೀರ ಸರ್ಕಾರಲ್ಲಿ ಮಂತ್ರಿ ಮಂಡಲವನ್ನು ಸಂಪೂರ್ಣ ಬದಲಾಯಿಸುತ್ತಿರುವ ಕಾರಣಕ್ಕೆ ಏಪ್ರಿಲ್17 ರಂದು ಬಿಜೆಪಿಯ ಎಲ್ಲ ಸಚಿವರೂ ರಾಜೀನಾಮೆ ನೀಡಿದ್ದರು.  ಪ್ರಮುಖವಾಗಿ ಕಥುವಾ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ಕುರಿತು ದೇಶದಾದ್ಯಂತ ಆಕ್ರೋಶ ಎದ್ದ ನಂತರ ನಡೆದಿದ್ದ ಈ ಬೆಳವಣಿಗೆ ಜಮ್ಮು -ಕಾಶ್ಮೀರದ ಪಿಡಿಪಿ(ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ) ಮತ್ತು ಬಿಜೆಪಿ ನಡುವೆ ಬಿರುಕು ಮೂಡುತ್ತಿದೆ ಎಂಬ ಅನುಮಾನ ಹುಟ್ಟಿಸಿತ್ತು. ಆದರೆ ಬಿಜೆಪಿ ವರಿಷ್ಠರು ಇಲ್ಲಿನ ಎಲ್ಲ ಸಚಿವರ ಬಳಿ ಸಾಮೂಹಿಕ ರಾಜೀನಾಮೆ ಕೇಳಿದ್ದರಲ್ಲಿ ಬೇರೆ ಯಾವ ಉದ್ದೇಶವೂ ಇಲ್ಲ. ಸಚಿವ ಸಂಪುಟ ಪುನಾರಚನೆಗಷ್ಟೇ ಈ ನಿರ್ಧಾರ ಎಂದು ಊಹಾಪೋಹಗಳಿಗೆ ತೆರೆ ಎಳೆದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com