ಎನ್ಆರ್‏ಸಿ ವಿವಾದ: ಅಡ್ವಾನಿ ಸೇರಿದಂತೆ ಹಿರಿಯ ರಾಜಕಾರಾಣಿಗಳನ್ನು ಭೇಟಿ ಮಾಡಿದ ಮಮತಾ ಬ್ಯಾನರ್ಜಿ

ಅಸ್ಸಾಂ ನ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್‌ ಕುರಿತಂತೆ ಚರ್ಚೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಅಡ್ವಾಣಿ ಸೇರಿದಂತೆ ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡಿದ್ದಾರೆ.
ಎನ್ ಸಿಆರ್ ಕರಡು ವಿವಾದ: ಅಡ್ವಾನಿ ಸೇರಿದಂತೆ ಹಿರಿಯ ರಾಜಕಾರಾಣಿಗಳನ್ನು ಭೇಟಿ ಮಾಡಿದ ಮಮತಾ ಬ್ಯಾನರ್ಜಿ
ಎನ್ ಸಿಆರ್ ಕರಡು ವಿವಾದ: ಅಡ್ವಾನಿ ಸೇರಿದಂತೆ ಹಿರಿಯ ರಾಜಕಾರಾಣಿಗಳನ್ನು ಭೇಟಿ ಮಾಡಿದ ಮಮತಾ ಬ್ಯಾನರ್ಜಿ
Updated on: 
ನವದೆಹಲಿ: ಅಸ್ಸಾಂ ನ ರಾಷ್ಟ್ರೀಯ ಜನಸಂಖ್ಯಾ ರಿಜಿಸ್ಟರ್‌ ಕುರಿತಂತೆ ಚರ್ಚೆ ನಡೆಯುತ್ತಿದ್ದು, ಪಶ್ಚಿಮ ಬಂಗಾಳ ಸಿಎಂ ಅಡ್ವಾಣಿ ಸೇರಿದಂತೆ ಹಿರಿಯ ರಾಜಕಾರಣಿಗಳನ್ನು ಭೇಟಿ ಮಾಡಿದ್ದಾರೆ. 
ನವದೆಹಲಿಗೆ ನಾಲ್ಕು ದಿನಗಳ ಪ್ರವಾಸ ಕೈಗೊಂಡಿರುವ ಮಮತಾ ಬ್ಯಾನರ್ಜಿ, ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಸಂಸತ್ ಭವನದಲ್ಲಿ ಭೇಟಿ ಮಾಡಿದ್ದು 20 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.  " ಅಡ್ವಾಣಿ ಅವರನ್ನು ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಿದೆ. ಇದೊಂದು ಸಾಮಾನ್ಯವಾದ ಮಾತುಕತೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. 
ಇದೇ ವೇಳೆ ಬಿಜೆಪಿ ಸಂಸದ ಕೀರ್ತಿ ಆಜಾದ್ ಅವರನ್ನೂ ಮಮತಾ ಬ್ಯಾನರ್ಜಿ ಭೇಟಿ ಮಾಡಿದ್ದು ಕುತೂಹಲ ಮೂಡಿಸಿದೆ. ಬಿಜೆಪಿ ನಾಯಕರಷ್ಟೇ ಅಲ್ಲದೇ ಕಾಂಗ್ರೆಸ್ ನಾಯಕರಾದ ಗುಲಾಂ ನಭಿ ಆಜಾದ್, ಅಹ್ಮದ್ ಪಟೇಲ್, ಸಮಾಜವಾದಿ ಪಕ್ಷದ ನಾಯಕರಾದ ರಾಮ್ ಗೋಪಾಲ್ ಯಾದವ್, ಜಯಾ ಬಚ್ಚನ್ ಅವರನ್ನೂ ಮಮತಾ ಬ್ಯಾನರ್ಜಿ ಭೇಟಿ ಮಾಡಿದ್ದಾರೆ. 
ಮಮತಾ ಬ್ಯಾನರ್ಜಿಯನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಕೀರ್ತಿ ಆಜಾದ್, ವಿರೋಧ ಪಕ್ಷಗಳನ್ನು ಒಗ್ಗೂಡಿಸಲು ಮಮತಾ ಬ್ಯಾನರ್ಜಿ ಅವರ ಶ್ರಮ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.  ಬಿಜೆಪಿ, ಕಾಂಗ್ರೆಸ್ ನಾಯಕರನ್ನು ಭೇಟಿ ಮಾಡಿದ ಬಳಿಕ ಮಾತನಾಡಿರುವ ಮಮತಾ ಬ್ಯಾನರ್ಜಿ ಎನ್ ಆರ್ ಸಿ ವಿರುದ್ಧ ಧ್ವನಿ ಎತ್ತುವಂತೆ ಶತೃಘ್ನ ಸಿನ್ಹಾ, ಯಶ್ವಂತ್ ಸಿನ್ಹಾ ಅವರಲ್ಲಿ ಮನವಿ ಮಾಡಿರುವುದಾಗಿ ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com