ಅಸ್ಸಾಂ ಎನ್ಆರ್‏ಸಿ ಕರಡು ವಿರುದ್ಧ ಹೇಳಿಕೆ; ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಎಫ್ಐಆರ್

ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪ್ರಕ್ರಿಯೆ ವಿರುದ್ಧ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ...
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ
ನವದೆಹಲಿ: ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪ್ರಕ್ರಿಯೆ ವಿರುದ್ಧ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಬುಧವಾರ ಎಫ್ಐಆರ್ ದಾಖಲಾಗಿದೆ. 
ಭಾರತೀಯ ಜನತಾ ಯುವ ಮೋರ್ಚಾ (ಬಿಜೆಪಿ) ಅಸ್ಸಾಂ ರಾಜ್ಯದ ಡಿಬ್ರುಗರ್ಹ್ ನಲ್ಲಿರುವ ನಹರ್ಕಾಟಿಯಾ ಪೊಲೀಸ್  ಠಾಣೆಯಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ ಎಫ್ಐಆರ್ ದಾಖಲಿಸಿದೆ ಎಂದು ತಿಳಿದುಬಂದಿದೆ. 
ಯುವ ಮೋರ್ಚಾ ನೀಡಿರುವ ದೂರನ್ನು ಸ್ವೀಕರಿಸಿರುವ ಪೊಲೀಸರು ಪ್ರಕರಣವಣವನ್ನು ಗುವಾಹಟಿ ಮುಖ್ಯ ಕಚೇರಿ ನೋಡಿಕೊಳ್ಳಲಿದೆ ಎಂದು ತಿಳಿಸಿದ್ದಾರೆಂದು ವರದಿಯೊಂದು ತಿಳಿಸಿದೆ. 
ನಿನ್ನೆಯಷ್ಟೇ ರಾಜಧಾನಿ ದೆಹಲಿಯಲ್ಲಿ ಮಾತನಾಡಿದ್ದ ಮಮತಾ ಬ್ಯಾನರ್ಜಿಯವರು ಬಿಜೆಪಿ ವಿರುದ್ಧ ತೀವ್ರವಾಗಿ ವಾಗ್ದಾಳಿ ನಡೆಸಿದ್ದರು. 
ಅಸ್ಸಾಂನಲ್ಲಿ ನಡೆದ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್ ಆರ್ ಸಿ) ಪ್ರಕ್ರಿಯೆ ರಾಜಕೀಯ ಪ್ರೇರಿತ ಮತ್ತು ಜನರನ್ನು ಒಡೆಯುವ ತಂತ್ರ. ಕೇಸರಿ ಪಕ್ಷ ದೇಶ ಒಡೆಯಲು ಯತ್ನಿಸುತ್ತಿದೆ. ಆದರೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಎನ್ ಆರ್ ಸಿ ಪ್ರಕ್ರಿಯೆ ರಾಜಕೀಯ ಪ್ರೇರಿತವಾಗಿದ್ದು, ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ. ಈ ಹಿಂದೆ, ಭಾರತ, ಪಾಕಿಸ್ತಾನ ಮತ್ತು ಬಾಂಗ್ಲಾದೇಶ ಒಂದೇಯಾಗಿತ್ತು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. 1971ರ ಮಾರ್ಚ್ ವರೆಗೆ ಭಾರತಕ್ಕೆ ಬಂದವರೆಲ್ಲ ಭಾರತೀಯರು ಎಂದು ಹೇಳಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com