ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ, ಆದ್ರೆ 2019ರಲ್ಲಿ ಬಿಜೆಪಿ ಫಿನಿಶ್: ಮಮತಾ ಬ್ಯಾನರ್ಜಿ

ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂಬರುವ ...
ಸೋನಿಯಾ, ರಾಹುಲ್ ಭೇಟಿ ಮಾಡಿದ ಮಮತಾ ಬ್ಯಾನರ್ಜಿ
ಸೋನಿಯಾ, ರಾಹುಲ್ ಭೇಟಿ ಮಾಡಿದ ಮಮತಾ ಬ್ಯಾನರ್ಜಿ
ನವದೆಹಲಿ: ನಾನು ಪ್ರಧಾನಿ ಹುದ್ದೆಯ ಆಕಾಂಕ್ಷಿಯಲ್ಲ ಎಂದಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ನಮ್ಮ ಮೊದಲ ಆದ್ಯತೆ ಎಂದು ಬುಧವಾರ ಹೇಳಿದ್ದಾರೆ.
ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ, ಪ್ರತಿಪಕ್ಷಗಳು ಒಗ್ಗೂಡುತ್ತಿರುವುದನ್ನು ಕಂಡು ಬಿಜೆಪಿ ಕಂಗಾಲಾಗಿದೆ. ಬಿಜೆಪಿಯ ಕೊನೆಗಾಲ ಸಮೀಪಿಸಿದೆ. 2019ರಲ್ಲಿ ಬಿಜೆಪಿ ಅಂತ್ಯವಾಗಲಿದೆ ಎಂದು ಹೇಳಿದ್ದಾರೆ.
ಬಿಜೆಪಿ ವಿರುದ್ಧ ಪ್ರತಿಪಕ್ಷಗಳನ್ನು ಒಗ್ಗೂಡಿಸಲು ಯತ್ನಿಸುತ್ತಿರುವ ಮಮತಾ ಬ್ಯಾನರ್ಜಿ ಅವರು ಕಳೆದ ಎರಡು ದಿನಗಳಿಂದ ರಾಷ್ಟ್ರ ರಾಜಧಾನಿಯಲ್ಲಿ ಬಿಡಾರ ಹೂಡಿದ್ದು, ಯುಪಿಎ ಅಧ್ಯಕ್ಷ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್, ಜೆಡಿಎಸ್ ಮುಖ್ಯಸ್ಥ ಎಚ್ ಡಿ ದೇವೇಗೌಡ, ಬಿಜೆಪಿ ಹಿರಿಯ ನಾಯಕ ಎಲ್ ಕೆ ಆಡ್ವಾಣಿ, ಶಿವಸೇನಾ ಮುಖಂಡ ಸಂಜಯ್ ರಾವತ್ ಹಾಗೂ ಬಿಜೆಪಿ ಭಿನ್ನಮತೀಯ ಕೀರ್ತಿ ಆಜಾದ್ ಅವರನ್ನು ಭೇಟಿ ಮಾಡಿದ್ದಾರೆ.
ಪ್ರತಿಪಕ್ಷಗಳು ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಈಗಾಗಲೇ ಕೈಜೋಡಿಸಿದ್ದು, ಸಂಸತ್ ಹೊರಗಡೆಯೂ ಏಕೆ ಒಂದಾಗಿ ಹೋರಾಟ ನಡೆಸಬಾರದು ಎಂದು ದೀದಿ ಪ್ರಶ್ನಿಸಿದ್ದಾರೆ.
ದೇಶದ ಸದ್ಯದ ರಾಜಕೀಯ ಸ್ಥಿತಿಗತಿ ಬಗ್ಗೆ ಮತ್ತು ಬಿಜೆಪಿ ಸೋಲಿಸುವ ಕಾರ್ಯತಂತ್ರದ ಬಗ್ಗೆ ಎಲ್ಲಾ ಪ್ರತಿಪಕ್ಷಗಳ ನಾಯಕರೊಂದಿಗೆ ಚರ್ಚಿಸಿದ್ದೇನೆ ಎಂದು ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಜನವರಿ 19ರಂದು ಕೋಲ್ಕತಾದಲ್ಲಿ ಆಯೋಜಿಸಿರುವ ಬೃಹತ್ ರ್ಯಾಲಿಗೆ ಪ್ರತಿಪಕ್ಷಗ ನಾಯಕರಿಗೆ ಮಮತಾ ಬ್ಯಾನರ್ಜಿ ಆಹ್ವಾನಿ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com