ಬಿಹಾರದ ಆಶ್ರಯ ಮನೆಯಲ್ಲಿ ಅಪ್ರಾಪ್ತ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದ್ದ ಸುಪ್ರೀಂ ಕೋರ್ಟ್, ಈ ಸಂಬಂಧ ಬಿಹಾರ ಸರ್ಕಾರ ಹಾಗೂ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿಗೊಳಿಸಿದೆ. ಬಿಹಾರದಲ್ಲಿ ಎನ್ ಜಿಒ ಒಂದು ನಡೆಸುತ್ತಿರುವ ಆಶ್ರಯ ಮನೆಯಲ್ಲಿ 40 ಜನ ಯುವತಿಯರಿದ್ದು, ಈ ಪೈಕಿ ಬಹುತೇಕರ ಮೇಲೆ ಲೈಂಗಿಕ ಕ್ರಿಯೆ ನಡೆದಿದೆ ಎಂದು ತಿಳಿದುಬಂದಿತ್ತು. ವಿಷಯ ಬಹಿರಂಗವಾಗುತ್ತಿದ್ದಂತೆಯೇ ಎನ್ ಜಿಒ ವನ್ನು ಕಪ್ಪು ಪಟ್ಟಿಗೆ ಸೇರಿಸಲಾಗಿದ್ದು ಯುವತಿಯರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.