ಮಧ್ಯಪ್ರದೇಶದಲ್ಲಿ ಬಿಜೆಪಿಗೆ ಪ್ರಚಂಡ ಗೆಲುವು: ನ್ಯಾಷನಲ್ ಹೆರಾಲ್ಡ್ ಸಮೀಕ್ಷೆ ಟ್ವೀಟ್ ಮಾಡಿದ ಸ್ವಾಮಿ

ಮಧ್ಯಪ್ರದೇಶದಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸಮೀಕ್ಷೆ ವರದಿಯನ್ನು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ...
ಬಿಜೆಪಿ
ಬಿಜೆಪಿ
ನವದೆಹಲಿ: ಮಧ್ಯಪ್ರದೇಶದಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಸಮೀಕ್ಷೆ ವರದಿಯನ್ನು ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಮುಖವಾಣಿ ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಇತ್ತೀಚೆಗಷ್ಟೇ ರಫೇಲ್ ಡೀಲ್ ಕೂಡ ಬೋರ್ಪೋರ್ಸ್ ಹಗರಣದಂತೆಯೇ ಎಂದು ಹೋಲಿಕೆ ಮಾಡಿ ವಿವಾದಕ್ಕೆ ಗುರಿಯಾಗಿತ್ತು. ಇದೀಗ ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆಯೊದನ್ನು ಪತ್ರಿಕೆ ಪ್ರಕಟಿಸಿ ಎಡವಟ್ಟು ಮಾಡಿಕೊಂಡಿದೆ. 
ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಎಸ್ಪಿ ಮೈತ್ರಿ ಮಾಡಿಕೊಳ್ಳದೆ ಪ್ರತ್ಯೇಕವಾಗಿ ಸ್ಪರ್ಧಿಸಿದರೆ 147 ಸೀಟುಗಳನ್ನು ಬಿಜೆಪಿ ಪಡೆದು ಸುಲಭವಾಗಿ ಸರ್ಕಾರ ರಚಿಸಲಿದೆ ಎಂದು ವರದಿ ಮಾಡಿದೆ. 
ಒಂದು ವೇಳೆ ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ 126 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಸಮೀಕ್ಷೆ ವರದಿಯಲ್ಲಿ ವಿವರಿಸಲಾಗಿದೆ. ವೈತ್ರಿ ಮಾಡಿಕೊಂಡರೆ ಕಾಂಗ್ರೆಸ್ 103 ಹಾಗೂ ಮೈತ್ರಿ ಮಾಡಿಕೊಳ್ಳದಿದ್ದರೆ 73 ಸ್ಥಾನಗಳಲ್ಲಿ ಗೆಲ್ಲಲ್ಲಿದೆ ಎಂದು ವರದಿ ಪ್ರಕಟಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com