ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರದ ವಾದ

ಮುಂಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ನೀಡುವುದರ ಪರವಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಬಲವಾದ ವಾದ ಮಂಡಿಸಿದ್ದು, ಶೇ.22.5 ರಷ್ಟು ಮೀಸಲು ನೀಡಬೇಕೆಂದು ಹೇಳಿದೆ.
ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರದ ವಾದ
ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಸುಪ್ರೀಂ ಕೋರ್ಟ್ ನಲ್ಲಿ ಕೇಂದ್ರದ ವಾದ
ನವದೆಹಲಿ: ಮುಂಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ನೀಡುವುದರ ಪರವಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಬಲವಾದ ವಾದ ಮಂಡಿಸಿದ್ದು, ಶೇ.22.5 ರಷ್ಟು ಮೀಸಲು ನೀಡಬೇಕೆಂದು ಹೇಳಿದೆ. 
ಅಟಾರ್ನಿ ಜನರಲ್ ಕೆಕೆ ವೇಣುಗೋಪಾಲ್ ಅವರು ಸುಪ್ರೀಂ ಕೋರ್ಟ್ ನಲ್ಲಿ ಈ ಬಗ್ಗೆ ವಾದ ಮಂಡಿಸಿದ್ದು, ಸಾವಿರಾರು ವರ್ಷಗಳಿಂದ ಎಸ್ ಸಿ/ಎಸ್ ಟಿಗಳಿಗೆ ವಂಚನೆಯಾಗಿದ್ದು, ಎಸ್ ಸಿ/ ಎಸ್ ಟಿ ನೌಕರರು ಹಿಂದುಳಿದವರೆಂದು ಭಾವಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಮುಂಬಡ್ತಿಯಲ್ಲಿ ಶೇ.22.5 ರಷ್ಟು ಮೀಸಲು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ. 
2006 ರಲ್ಲಿ ಸುಪ್ರೀಂ ಕೋರ್ಟ್ ಆದೇಶ ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲಾತಿಗೆ ವಿರುದ್ಧವಾಗಿ ಬಂದಿತ್ತು. ಅಷ್ಟೇ ಅಲ್ಲದೇ ಸರ್ಕಾರ ಬಡ್ತಿಯಲ್ಲಿನ ಮೀಸಲಾತಿಗೆ ಸಂಬಂಧಿಸಿದಂತೆ ದೃಢವಾದ ಅಂಕಿ-ಅಂಶಗಳನ್ನು ಮಂಡಿಸಿ ಸಮರ್ಥಿಸಿದರೆ ಮಾತ್ರ ಬಡ್ತಿ ನೀಡಬಹುದೆಂದು ಹೇಳಿತ್ತು.
ದೇಶದಲ್ಲಿ ಈಗಾಗಲೇ ಎಸ್ ಸಿ/ಎಸ್ ಟಿ ದೌರ್ಜನ್ಯ ಕಾಯ್ದೆಯ ಮೂಲ ನಿಬಂಧನೆಗಳನ್ನು ಮರುಸ್ಥಾಪಿಸಬೇಕೆಂಬ ಆಗ್ರಹ ಹೆಚ್ಚಾಗತೊಡಗುತ್ತಿದ್ದಂತೆಯೇ,  ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ವಿಷಯದಲ್ಲೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗತೊಡಗಿತ್ತು. ಈ ಬೆನ್ನಲ್ಲೇ ಸುಪ್ರೀಂ ಕೋರ್ಟ್ ನಲ್ಲಿ  ಬಡ್ತಿಯಲ್ಲಿ ಎಸ್ ಸಿ/ಎಸ್ ಟಿ ಮೀಸಲು ಪರವಾಗಿ ಕೇಂದ್ರ ಸರ್ಕಾರ ವಾದ ಮಂಡಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com