ವಸತಿನಿಲಯಗಳಲ್ಲಿ ಲೈಂಗಿಕ ಕಿರುಕುಳ : ನಿತಿಶ್ ವಿರುದ್ಧ ಆರ್ ಜೆಡಿ ಪ್ರತಿಭಟನೆಯಲ್ಲಿ ರಾಹುಲ್ ಭಾಗಿ

ಬಿಹಾರದಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿತಿಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಕರೆ ನೀಡಿರುವ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.
ರಾಹುಲ್ ಗಾಂಧಿ, ತೇಜಸ್ವಿ ಯಾದವ್
ರಾಹುಲ್ ಗಾಂಧಿ, ತೇಜಸ್ವಿ ಯಾದವ್

ಮುಜಾಫರ್ ಪುರ್ :  ಬಿಹಾರದಲ್ಲಿ ವಸತಿ ನಿಲಯಗಳಲ್ಲಿ ಲೈಂಗಿಕ ಪ್ರಕರಣಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ನಿತಿಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಆರ್ ಜೆಡಿ ನಾಯಕ ತೇಜಸ್ವಿ ಯಾದವ್  ಕರೆ ನೀಡಿರುವ ಪ್ರತಿಭಟನೆಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಾಲ್ಗೊಳ್ಳಲಿದ್ದಾರೆ.

ನವದೆಹಲಿಯ ಜಂಥರ್ ಮಂಥರ್ ಬಳಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ  ಹಲವು ಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ರಾಹುಲ್ ಗಾಂಧಿ ಕೂಡಾ ಭಾಗವಹಿಸಲಿದ್ದಾರೆ ಎಂದು  ತೇಜಸ್ವಿ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಖೈದಿಗಳ ಮೇಲಿನ ಲೈಂಗಿಕ ಕಿರುಕುಳ  ಪ್ರಕರಣಕ್ಕೆ ಸಂಬಂಧಿಸಿದಂತೆ  ಜುಲೈ 24 ರಂದು ಮುಜಾಫರ್ ಪುರ್ ನ ವಸತಿ ನಿಲಯದಲ್ಲಿನ 11 ನೌಕರರನ್ನು ಬಂಧಿಸಲಾಗಿದ್ದು, 44 ಬಾಲಕಿಯರನ್ನು ರಕ್ಷಿಸಲಾಗಿದೆ.

ಈ ಪ್ರಕರಣಕ್ಕೆ  ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಿನ್ನೆ  ಬಿಹಾರ ಸರ್ಕಾರಕ್ಕೆ ಸುಮೊಟೊ ನೋಟಿಸ್ ನೀಡಿದ್ದು,  ಪ್ರತಿಕ್ರಿಯೆ ನೀಡುವಂತೆ ತಿಳಿಸಿದೆ.

ವಸತಿ ನಿಲಯದಲ್ಲಿನ ಮಾಲೀಕ ಬ್ರಜೇಶ್ ಠಾಕೂರ್ ಪೋಟೋ   ಆರೋಪಿತರ ಪಟ್ಟಿಯಲ್ಲಿ ಬೆಳಕಿಗೆ ಬರುತ್ತಿದ್ದಂತೆ  ನಿತಿಶ್ ಕುಮಾರ್  ರಾಜೀನಾಮೆಗೆ ಒತ್ತಡ ಹೆಚ್ಚಾಗಿ ಕೇಳಿಬರುತ್ತಿದೆ. ಠಾಕೂರ್  ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com