ಎಲ್ ಒಸಿ ಬಳಿ ದಾಳಿ ಮಾಡಲು ಕಾದು ಕುಳಿತಿದ್ದಾರೆ 600ಕ್ಕೂ ಅಧಿಕ ಪಾಕಿಸ್ತಾನಿ ಉಗ್ರರು: ಗುಪ್ತಚರ ಇಲಾಖೆ ಎಚ್ಚರಿಕೆ

ಭಾರತದಲ್ಲಿ ಭಾರಿ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಪ್ರಾಯೋಜಿತ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಪಾಕಿಸ್ತಾನದ ಪ್ರಧಾನಿಯಾಗಿ ಮಾಜಿ ಕ್ರಿಕೆಟಿಗ ಮತ್ತು ಪಿಟಿಐ ಅಧ್ಯಕ್ಷ ಇಮ್ರಾನ್ ಖಾನ್ ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನವೇ ಭಾರತದಲ್ಲಿ ಭಾರಿ ಪ್ರಮಾಣದ ವಿಧ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಸೇನೆ ಪ್ರಾಯೋಜಿತ ಉಗ್ರರು ಸಂಚು ರೂಪಿಸಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಇದೇ ಆಗಸ್ಟ್ 11ರಂದು ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದು, ಆಗಸ್ಚ್ 15ರಂದು ಭಾರತದಲ್ಲಿ ಸ್ವಾತಂತ್ಯ್ರ ದಿನಾಚರಣೆ ನಡೆಯುತ್ತಿದೆ. ಈ ಎರಡೂ ಕಾರ್ಯಕ್ರಮಗಳ ನಡುವೆ ಭಾರತದಲ್ಲಿ ಭಾರಿ ಪ್ರಮಾಣದ ವಿದ್ವಂಸಕ ಕೃತ್ಯವೆಸಗಲು ಪಾಕಿಸ್ತಾನ ಮೂಲದ ಉಗ್ರರು ಸಂಚು ರೂಪಿಸುತ್ತಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಆತಂಕಕಾರಿ ವಿಚಾರವೆಂದರೆ ಉಗ್ರರ ದುಷ್ಕೃತ್ಯಕ್ಕೆ ಪಾಕಿಸ್ತಾನಿ ಸೇನೆ ಮತ್ತು ಪಾಕ್ ಗುಪ್ತಚರ ಇಲಾಖೆ ಐಎಸ್ಐ ಬೆಂಬಲ ನೀಡುತ್ತಿದೆ. ಅಲ್ಲದೆ ಉಗ್ರರ ಬಾರ್ಡರ್ ಆ್ಯಕ್ಷನ್ ಟೀಂ (ಬ್ಯಾಟ್)ತಂಡದ ಸೋಗಿನಲ್ಲಿ ಪಾಕಿಸ್ತಾನಿ ಸೈನಿಕರೇ ಭಾರತೀಯ ಯೋಧರ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಗಡಿಯಲ್ಲಿ ಈಗಾಗಲೇ ಸುಮಾರು 600ಕ್ಕೂ ಅಧಿಕ ಉಗ್ರರು ಮತ್ತು ಉಗ್ರರ ಸೋಗಿನಲ್ಲಿರುವ ಪಾಕಿಸ್ತಾನಿ ಸೈನಿಕರು ಗಡಿನಿಯಂತ್ರಣ ರೇಖೆ ದಾಟಲು ಕಾದು ಕುಳಿತಿದ್ದು, ಅವಕಾಶ ಸಿಕ್ಕಾಕ್ಷಣವೇ ಗಡಿ ನುಸುಳಲು ಕಾಯುತ್ತಿದ್ದಾರೆ ಎಂದು ಗುಪ್ತಚರ ಇಲಾಖೆ ಹೇಳಿದೆ.
ಈ ಬಗ್ಗೆ ಕೇಂದ್ರ ಗೃಹ ಇಲಾಖೆಗೆ ವರದಿಯನ್ನು ಕೂಡ ನೀಡಲಾಗಿದ್ದು, ಸೇನೆಗೆ ಗಡಿಯಲ್ಲಿ ಕಟ್ಟೆಚ್ಚರದಿಂದ ಇರುವಂತೆ ಸೂಚಿಸಲಾಗಿದೆ.
ಇನ್ನು ವರದಿಯಲ್ಲಿರುವಂತೆ ಈ ಹಿಂದೆ ನಡೆದ ಸರ್ಜಿಕಲ್ ದಾಳಿಯ ಬಳಿಕ ಇದೇ ಮೊದಲ ಬಾರಿಗೆ ಉಗ್ರರು ಇಂತಹುದೊಂದು ಸಂಚು ರೂಪಿಸಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com