ಕರ್ನೂಲು ಕಲ್ಲುಕ್ವಾರಿ ಸ್ಫೋಟ: 5 ಲಕ್ಷ ಪರಿಹಾರ ಘೋಷಿಸಿದ ಆಂಧ್ರ ಪ್ರದೇಶ ಸರ್ಕಾರ

ಆಂಧ್ರ ಪ್ರದೇಶದ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸಂತ್ರಸ್ಥರಿಗೆ ಆಂಧ್ರ ಪ್ರದೇಶ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕರ್ನೂಲು: ಆಂಧ್ರ ಪ್ರದೇಶದ ಕಲ್ಲು ಕ್ವಾರಿಯಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸಂತ್ರಸ್ಥರಿಗೆ ಆಂಧ್ರ ಪ್ರದೇಶ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.
ನಿನ್ನೆ ಕರ್ನೂಲು ಜಿಲ್ಲೆಯ ಆಲೂರು ತಾಲ್ಲೂಕಿನ ಹಾತಿಬೆಳ್ಗಮ್ ಗ್ರಾಮದ ಕಲ್ಲುಕ್ವಾರಿಯಲ್ಲಿ ಸ್ಫೋಟ ಸಂಭವಿಸಿ 10 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದರು. ಅಂತೆಯೇ ಹತ್ತಾರು ಮಂದಿ ಗಾಯಗೊಂಡಿದ್ದರು. ಇದೀಗ ಈ ಪ್ರಕರಣವನ್ನು ಆಂಧ್ರ ಪ್ರದೇಶ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ತನಿಖೆ ಆದೇಶಿಸಿದೆ.
ಅಲ್ಲದೆ ಸ್ಫೋಟದಲ್ಲಿ ಸಾವನ್ನಪ್ಪಿದವರ ಕುಟುಂಬಸ್ಥರಿಗೆ ತಲಾ 5 ಲಕ್ಷ ಮತ್ತು ಗಾಯಾಳುಗಳ ಆಸ್ಪತ್ರೆ ವೆಚ್ಚವನ್ನು ಸರ್ಕಾರ ಭರಿಸುವುದಾಗಿ ಸಿಎಂ ಎಂ ಚಂದ್ರಬಾಬು ನಾಯ್ಜು ಅವರು ಘೋಷಿಸಿದ್ದಾರೆ. ಸ್ಫೋಟದ ರಭಸಕ್ಕೆ ಸಮೀಪದಲ್ಲಿದ್ದ 3 ಟ್ರಾಕ್ಟರ್, ಲಾರಿ ಮತ್ತು 2 ಶೆಡ್ ಗಳೂ ಕೂಡ ಸುಟ್ಟುಹೋಗಿವೆ. 
ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ವಾರಿ ಮಾಲೀಕರ ವಿರುದ್ಧ ಐಪಿಸಿ ಸೆಕ್ಷನ್ 304 ಪಾರ್ಟ್ 2, ಸೆಕ್ಷನ್ 3 ಮತ್ತು 5ರ ಅಡಿಯಲ್ಲಿ ದೂರು ದಾಖಲಿಸಿಕೊಳ್ಳಲಾಗಿದೆ. ಅಂತೆಯೇ ತಪ್ಪಿತಸ್ಥರನ್ನು ಬಂಧಿಸಲಾಗುತ್ತದೆ ಎಂದು ಸ್ಥಳೀಯ ಎಸ್ ಪಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com