ಹೆಲ್ಮೆಟ್ ಧರಿಸಿಲ್ಲ ಎಂದು ಪ್ರಶ್ನಿಸಿದ್ದಕ್ಕೆ ಪೊಲೀಸ್‌ಗೆ ಅಸಭ್ಯವಾಗಿ ನಿಂದಿಸಿದ ಯುವತಿ, ವಿಡಿಯೋ ವೈರಲ್!

ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂಬ ಆದೇಶವಿದ್ದರೂ ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಪ್ರಯಾಣಿಸುವುದು ಅಪಾಯಕ್ಕೆ ದಾರಿ ಮಾಡಿಕೊಟ್ಟಂತೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹೈದರಾಬಾದ್: ಹೆಲ್ಮೆಟ್ ಧರಿಸುವುದು ಕಡ್ಡಾಯ ಎಂಬ ಆದೇಶವಿದ್ದರೂ ಬೈಕ್ ಸವಾರರು ಹೆಲ್ಮೆಟ್ ಧರಿಸದೇ ಪ್ರಯಾಣಿಸುವುದು ಅಪಾಯಕ್ಕೆ ದಾರಿ ಮಾಡಿಕೊಟ್ಟಂತೆ. 
ಇನ್ನು ಹೆಲ್ಮೆಟ್ ಧರಿಸದೆ ಬೈಕ್ ಚಲಾಯಿಸುತ್ತಿದ್ದ ಯುವತಿಯನ್ನು ಸಂಚಾರಿ ಪೊಲೀಸ್ ಒಬ್ಬರು ತಡೆದು ನಿಲ್ಲಿಸಿ ಹೆಲ್ಮೆಟ್ ಯಾಕೆ ಧರಿಸಿಲ್ಲ ಎಂದು ಪೊಲೀಸರು ಪ್ರಶ್ನಿಸಿದ್ದಕ್ಕೆ ಯುವತಿ ಅಸಭ್ಯ ಭಾಷೆ ಬಳಿಸಿ ನಿಂದಿಸಿದ್ದಾರೆ. ಇದನ್ನು ಸಾರ್ವಜನಿಕರೊಬ್ಬರು ಮೊಬೈಲ್ ನಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣಕ್ಕೆ ಅಪ್ ಲೋಡ್ ಮಾಡಿದ್ದು ವಿಡಿಯೋ ವೈರಲ್ ಆಗಿದೆ. 
ಹೆಲ್ಮೆಟ್ ಧರಿಸಿದೆ ಪ್ರಯಾಣಿಸಿದ್ದಲ್ಲದೆ ಯುವತಿ ತಮ್ಮ ಡ್ರೈವಿಂಗ್ ಲೈಸನ್ಸ್ ಅನ್ನು ಸಂಚಾರಿ ಪೊಲೀಸರಿಗೆ ತೋರಿಸಲು ನಿರಾಕರಿಸಿದ್ದಾಳೆ. ಇನ್ನು ಯುವತಿಯ ಅಸಹ್ಯಕರ ಮಾತಿಗೆ ಕಿವಿಗೊಡದ ಪೊಲೀಸರು ರಸ್ತೆ ನಿಮಯ ಉಲ್ಲಂಘನೆ ಮಾಡಿರುವ ಆರೋಪದಡಿ ಕೇಸ್ ದಾಖಲು ಮಾಡಿದ್ದಾರೆ. 
ಇದರಿಂದ ಕುಪಿತಗೊಂಡ ಯುವತಿ ತಮ್ಮ ಸ್ಕೂಟಿಯನ್ನು ಅಲ್ಲೇ ಬಿಟ್ಟು ಹೋಗಿದ್ದಾಳೆ. ಈ ಎಲ್ಲ ಘಟನೆ ಮೊಬೈಲ್ ನಲ್ಲಿ ಸೆರೆಯಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com