ಕಾಂಗ್ರೆಸ್ ಕಾರ್ಯಕಾರಿಣಿ ಸಭೆ : ಮೋದಿ ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು ನಿರ್ಧಾರ-ರಣದೀಪ್‌ ಸುರ್ಜಿವಾಲಾ

ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿನ ಬ್ಯಾಂಕ್ ಹಗರಣ, ರಾಫೆಲ್ ಒಪ್ಪಂದ, ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತಿತರ ಭ್ರಷ್ಟಾಚಾರ ವಿಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿಣಿ ಸಭೆ
ಕಾಂಗ್ರೆಸ್ ಕಾರ್ಯಕಾರಿಣಿ ಸಭೆ

ನವದೆಹಲಿ: ಪ್ರಧಾನಿ ನರೇಂದ್ರಮೋದಿ ಸರ್ಕಾರದಲ್ಲಿನ  ಬ್ಯಾಂಕ್ ಹಗರಣ, ರಾಫೆಲ್  ಒಪ್ಪಂದ,  ಹದಗೆಟ್ಟ ಆರ್ಥಿಕ ಪರಿಸ್ಥಿತಿ ಮತ್ತಿತರ  ಭ್ರಷ್ಟಾಚಾರ ವಿಚಾರದ ಬಗ್ಗೆ ಪ್ರಚಾರ ಕೈಗೊಳ್ಳಲು  ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂದು ನಡೆದ ಕಾಂಗ್ರೆಸ್ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಅಸ್ಸಾಂ ರಾಷ್ಟ್ರೀಯ ಪೌರತ್ವ ನೋಂದಣಿ ವಿವಾದದ ಬಗ್ಗೆಯೂ   ಚರ್ಚೆ ನಡೆಸಲಾಯಿತು.

ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್, ನಾಯಕರಾದ ಎ. ಕೆ. ಆಂಟೋನಿ, ಗುಲಾಂ ನಬಿ ಅಜಾದ್,  ಮಲ್ಲಿಕಾರ್ಜುನ್ ಖರ್ಗೆ, ಅಹ್ಮದ್ ಪಟೇಲ್, ಅಶೋಕ್ಲ್ ಗೆಹ್ಲೊಟ್, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತಿತರ ನಾಯಕರು ಪಾಲ್ಗೊಂಡಿದ್ದರು. ಆದಾಗ್ಯೂ,  ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾಗಾಂಧಿ ಈ ಸಭೆಯಲ್ಲಿ ಪಾಲ್ಗೊಂಡಿರಲಿಲ್ಲ.

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷ ನಾದ ನಂತರ ಹೊಸದಾಗಿ ನೇಮಕಗೊಂಡ ಕಾಂಗ್ರೆಸ್ ಕಾರ್ಯಕಾರಿಣಿಯ ಇದು ಎರಡನೇ ಸಭೆಯಾಗಿದೆ.

ಸಭೆಯ ಬಳಿಕ ಮಾತನಾಡಿದ ಕಾಂಗ್ರೆಸ್ ಮುಖ್ಯ ವಕ್ತಾರ ರಣದೀಪ್‌ ಸುರ್ಜಿವಾಲಾ, ಮುಂದಿನ ದಿನಗಳಲ್ಲಿ ರಾಜ್ಯ ಘಟಕಗಳು  ಹಾಗೂ ನಾಯಕರೊಂದಿಗೆ ಚರ್ಚಿಸಿ  ಮೋದಿ ಸರ್ಕಾರದ  ಭ್ರಷ್ಟಾಚಾರದ ವಿರುದ್ಧ ಜನಾಂದೋಲನ ಅಥವಾ ಪ್ರಚಾರ ಕೈಗೊಳ್ಳಲು ನಿರ್ಧರಿಸಲಾಯಿತು ಎಂದು ತಿಳಿಸಿದರು.
ದೇಶದಲ್ಲಿನ ಪ್ರಸ್ತುತ ರಾಜಕೀಯ ಪರಿಸ್ಥಿತಿ ಕುರಿತಂತೆ ಚರ್ಚೆನಡೆಸಲಾಯಿತು. ಭ್ರಷ್ಟಾಚಾರ ಮತ್ತು ಯುವಜನಾಂಗಕ್ಕೆ ಉದ್ಯೋಗ ನೀಡುವಲ್ಲಿ ಮೋದಿ ಸರ್ಕಾರ ವಿಫಲತೆ  ಬಗ್ಗೆ ಜನರಿಗೆ ಅರಿವು ಮೂಡಿಸಲು ಕಾಂಗ್ರೆಸ್ ಪಕ್ಷಕ್ಕೆ ಸಾಕಷ್ಟು ಅವಕಾಶಗಳಿವೆ. ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡಿದ್ದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ರಾಹುಲ್ ಗಾಂಧಿ ಟ್ವಿಟರ್ ನಲ್ಲಿ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com