ಕರುಣಾನಿಧಿ ಆರೋಗ್ಯದಲ್ಲಿ ಸುಧಾರಣೆ, ಇನ್ನೆರಡು ದಿನಗಳಲ್ಲಿ ಮನಗೆ ವಾಪಸ್‌: ಡಿಎಂಕೆ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರ ಆರೋಗ್ಯದಲ್ಲಿ ಪರಿಣಾಮಕಾರಿ ಚೇತರಿಕೆ ಕಂಡುಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಅವರು ಮನೆಗೆ ವಾಪಸ್ ಆಗಲಿದ್ದಾರೆ ಎಂದು ಡಿಎಂಕೆ ಸ್ಪಷ್ಟನೆ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರ ಆರೋಗ್ಯದಲ್ಲಿ ಪರಿಣಾಮಕಾರಿ ಚೇತರಿಕೆ ಕಂಡುಬಂದಿದ್ದು, ಇನ್ನೆರಡು ಮೂರು ದಿನಗಳಲ್ಲಿ ಅವರು ಮನೆಗೆ ವಾಪಸ್ ಆಗಲಿದ್ದಾರೆ ಎಂದು ಡಿಎಂಕೆ ಸ್ಪಷ್ಟನೆ ನೀಡಿದೆ.
ಕರುಣಾನಿಧಿ ಅವರು ದಾಖಲಾಗಿರುವ ಚೆನ್ನೈನ ಕಾವೇರಿ ಆಸ್ಪತ್ರೆಯ ಸುತ್ತುಮುತ್ತ ಅವರ ಅಭಿಮಾನಿಗಳ ಆತಂಕ ದಿನೇ ದಿನೇ ಹೆಚ್ಚಾಗುತ್ತಿರುವಂತೆಯೇ ಡಿಎಂಕೆ ಪಕ್ಷ ಈ ಹೇಳಿಕೆ ಬಿಡುಗಡೆ ಮಾಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈಮುರುಗನ್‌ ಅವರು, 'ಕರುಣಾನಿಧಿ ಅವರು ಚೇತರಿಸಿಕೊಂಡಿಗಿದ್ದು, ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಲಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ವಿಚಾರವಾಗಿ ಮಾಧ್ಯಮಗಳಿಗೂ ಹೇಳಿಕೆ ನೀಡಿರುವ ಅವರು, 'ಕಳೆದ ವಾರಕ್ಕೆ ಹೋಲಿಸಿದರೆ ಕರುಣಾನಿಧಿ ಅವರ ಆರೋಗ್ಯದಲ್ಲಿ ಗಣನೀಯ ಸುಧಾರಣೆ ಕಂಡುಬಂದಿದೆ. ನಾವು ಹೇಳುವುದನ್ನು ಕೇಳಿಸಿಕೊಳ್ಳುವಷ್ಟು ಸಮರ್ಥರಾಗಿದ್ದಾರೆ. ಅವರು ತಮ್ಮ ಸಂಕಷ್ಟದ ದಿನಗಳನ್ನು ಜಯಿಸಿದ್ದಾರೆ. ಆರೋಗ್ಯದ ಏರಿಳಿತಗಳಲ್ಲಿ ಚೇತರಿಕೆಯಾಗಿದೆ. ಇನ್ನು ಎರಡು ಅಥವಾ ಮೂರು ದಿನಗಳಲ್ಲಿ ಮನೆಗೆ ಮರಳಲಿದ್ದಾರೆ  ಎಂದು ಹೇಳಿದರು. 
ಕಾವೇರಿ ಆಸ್ಪತ್ರೆಗೆ ಭೇಟಿ ನೀಡಲಿರುವ ರಾಷ್ಟ್ರಪತಿ ಕೋವಿಂದ್
ಇದೇ ವೇಳೆ ಅನಾರೋಗ್ಯದ ನಿಮಿತ್ತ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಾಗಿರುವ ಕರುಣಾನಿಧಿ ಅವರ ಆರೋಗ್ಯ ವಿಚಾರಿಸಲು ರಾಷ್ಟ್ರಪತಿ ಕೋವಿಂದ್ ಚೆನ್ನೈಗೆ ಆಗಮಿಸಲಿದ್ದಾರೆ. ಮೂಲಗಳ ಪ್ರಕಾರ ಇಂದು ಮಧ್ಯಾಹ್ನ 3.30ರ ಸುಮಾರಿಗೆ ಕೋವಿಂದ್ ಅವರು ಆಸ್ಪತ್ರೆಗೆ ಆಗಮಿಸಲಿದ್ದಾರೆ ಎನ್ನಲಾಗಿದೆ.
94 ವಯಸ್ಸಿನ ಕರುಣಾನಿಧಿ ಅವರನ್ನು ಅನಾರೋಗ್ಯದ ಕಾರಣ ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com