ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ಟಿಆರ್ ಎಸ್ ಮುಕ್ತ: ಕೆಸಿಆರ್

2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ತಮ್ಮ ಟಿಆರ್ ಎಸ್ ಪಕ್ಷ ಮುಕ್ತವಾಗಿದೆ ಎಂದು ತೆಲಂಗಾಣ ಸಿಎಂ ಮತ್ತು ಟಿಆರ್ ಎಸ್ ಪಕ್ಷದ ಅಧಿನಾಯಕ ಕೆ ಚಂದ್ರಶೇಖರರಾವ್ ಹೇಳಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ ಭೇಟಿ ಮಾಡಿದ್ದ ತೆಲಂಗಾಣ ಸಿಎಂ ಕೆಸಿಆರ್
ಪ್ರಧಾನಿ ಮೋದಿ ಭೇಟಿ ಮಾಡಿದ್ದ ತೆಲಂಗಾಣ ಸಿಎಂ ಕೆಸಿಆರ್
ಹೈದರಾಬಾದ್‌: 2019ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಚುನಾವಣೋತ್ತರ ಮೈತ್ರಿಗೆ ತಮ್ಮ ಟಿಆರ್ ಎಸ್ ಪಕ್ಷ ಮುಕ್ತವಾಗಿದೆ ಎಂದು ತೆಲಂಗಾಣ ಸಿಎಂ ಮತ್ತು ಟಿಆರ್ ಎಸ್ ಪಕ್ಷದ ಅಧಿನಾಯಕ ಕೆ ಚಂದ್ರಶೇಖರರಾವ್ ಹೇಳಿದ್ದಾರೆ ಎನ್ನಲಾಗಿದೆ.
ಶನಿವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ್ದ ಅವರು ಹಲವು ವಿಚಾರಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. ಪ್ರಮುಖವಾಗಿ ಉಭಯ ನಾಯಕರು ಚುನಾವಣಾ ಪೂರ್ವ ಮೈತ್ರಿ ಕುರಿತು ಮಾತುಕತೆ ನಡೆಸಿದ್ದಾರೆ ಎನ್ನಲಾಗುತ್ತಿದ್ದು, ಅಂತೆಯೇ ಚುನಾವಣಾ ಪೂರ್ವ ಮೈತ್ರಿಯಿಂದ ತಮ್ಮ ಪಕ್ಷಕ್ಕೆ ಲಾಭವಾಗುವ ಸಾಧ್ಯತೆ ಕಡಿಮೆ ಇದ್ದು, ಚುನಾವಣೆಯಲ್ಲಿ ಬಿಜೆಪಿಗೆ ಸಂಖ್ಯಾಬಲ ಕಡಿಮೆ ಕಂಡುಬಂದಲ್ಲಿ ಮೈತ್ರಿ ಮಾಡಿಕೊಳ್ಳಲು ಹಿಂಜರಿಯುವುದಿಲ್ಲ ಎಂದು ಚಂದ್ರಶೇಖರ್‌ ರಾವ್‌ ಹೇಳಿದ್ದಾರೆ ಎನ್ನಲಾಗಿದೆ.
ಇತ್ತೀಚೆಗಷ್ಟೇ ಲೋಕಸಭೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಟಿಡಿಪಿ ಮಂಡಿಸಿದ್ದ ಅವಿಶ್ವಾಸ ನಿರ್ಣಯದ ಮತದಾನ ಪ್ರಕ್ರಿಯೆಯಿಂದ ದೂರ ಸರಿಯುವ ಮೂಲಕ ಪರೋಕ್ಷವಾಗಿ ಟಿಆರ್‌ಎಸ್‌ ಮೋದಿ ಸರ್ಕಾರಕ್ಕೆ ಬೆಂಬಲ ನೀಡಿತ್ತು. ಎನ್ ಡಿಎ ಮೈತ್ರಿಕೂಟದದಿಂದ ಟಿಡಿಪಿ ಹಿಂದೆ ಸರಿದ ಬಳಿಕ ಬಿಜೆಪಿ ಈಗ ಟಿಆರ್ ಎಸ್‌ನೊಂದಿಗೆ ನಿಕಟತೆ ಹೊಂದಲು ಯತ್ನಿಸುತ್ತಿದೆ ಎನ್ನಲಾಗಿದೆ. ಅವಿಶ್ವಾಸ ಮತದ ಸಂದರ್ಭ ನಡೆದ ಚರ್ಚೆ ವೇಳೆ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡುರನ್ನು ಟೀಕಿಸಿದ್ದರು. ಅಂತೆಯೇ ತೆಲಂಗಾಣದ ಅಭಿವೃದ್ಧಿಗೆ ಸಿಎಂ ಕೆಸಿಆರ್ ಅವರನ್ನು ಪ್ರಶಂಸಿದ್ದನ್ನು ಇಲ್ಲಿ ಸ್ಮರಿಸಬಹುದು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com