ಬಿಜೆಪಿ ಶಾಸಕರ ಆಗ್ರಹ ದೆಹಲಿ ವಿಧಾನಸಭೆಯಲ್ಲಿ ಗದ್ದಲ ಉಂಟುಮಾಡಿದ್ದು, ವಿಜಯೇಂದ್ರ ಗುಪ್ತ ಅವರನ್ನು ದೆಹಲಿ ವಿಧಾನಸಭೆಯಿಂದ ಹೊರಹಾಕಿದ ಘಟನೆ ನಡೆದಿದೆ. ಆ.06 ರಂದು ವಿಧಾನಸಭೆಯ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆಯೇ ಗುಪ್ತಾ, ಸಾರ್ವಜನಿಕ ವಿಷಯಗಳ ಬಗ್ಗೆ ಚರ್ಚೆ ನಡೆಸಬೇಕೆಂದು ಆಗ್ರಹಿಸಿದರು. ಆದರೆ ಸ್ಪೀಕರ್ ರಾಮ್ ನಿವಾಸ್ ಗೋಯಲ್ ಅವರು ಈಗಾಗಲೇ ಗುರುತು ಹಾಕಿದ ಪ್ರಶ್ನೆಗಳ ಬಗ್ಗೆ ಚರ್ಚೆ ನಡೆಸಲು ಸೂಚಿಸಿದರು.