ನವದೆಹಲಿ: ಛತ್ತೀಸ್ಗಢದ ಸುಕ್ಮಾದಲ್ಲಿ ಭದ್ರತಾ ಪಡೆಗಳು ಎನ್'ಕೌಂಟರ್ ನಡೆಸಿದ್ದು 14 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ಸೋಮವಾರ ತಿಳಿದುಬಂದಿದೆ.
ಸುಕ್ಮಾದ ಗೊಲ್ಲಪಟ್ಟಿ ಮತ್ತು ಕೊಂಟ ನಡುವಿನ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಎನ್ ಕೌಂಟರ್ ನಡೆಸಿದ್ದು 14 ನಕ್ಸಲರನ್ನು ಹತ್ಯೆ ಮಾಡಿದೆ ಎಂದು ಅಧಿಕಾರಿಘಲು ತಿಳಿಸಿದ್ದಾರೆ.
ಜಿಲ್ಲಾ ಮೀಸಲು ಪಡೆ ಹಾಗೂ ಸಿಆರ್'ಪಿಎಫ್, ಅರೆ ಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿದ್ದು, 200 ನಕ್ಸಲರ ವಿರುದ್ಧ ಗುಂಡಿನ ಚಕಮಕಿ ನಡೆಸಿದೆ ಎಂದು ಪೊಲೀಸರು ಹೇಳಿದ್ದಾರೆ.
ಕಾರ್ಯಾಚರಣೆ ವೇಳೆ 14 ನಕ್ಸಲರನ್ನು ಹತ್ಯೆ ಮಾಡಲಾಗಿತ್ತು, ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಪ್ರಸ್ತುತ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ.