ಮೇಕೆ ಆಯ್ತು, ಈಗ ಗೋವಿನ ಮೇಲೆ 80ರ ಹರೆಯದ ಮುದುಕನಿಂದ ಅತ್ಯಾಚಾರ!

ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ ಅಥವಾ ಗರಿಷ್ಠ ಶಿಕ್ಷೆ ನೀಡಬೇಕು ಎಂಬ ಆದೇಶದ ನಡುವೆ ಇದೀಗ ಕಾಮಾಂಧರು ಪಶುಗಳ ಮೇಲೆ ತಮ್ಮ ಕಾಮತೃಷೆಯನ್ನು...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ರಾಜಗಢ(ಮಧ್ಯಪ್ರದೇಶ): ಮಹಿಳೆಯರು ಮತ್ತು ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ ಮರಣದಂಡನೆ ಅಥವಾ ಗರಿಷ್ಠ ಶಿಕ್ಷೆ ನೀಡಬೇಕು ಎಂಬ ಆದೇಶದ ನಡುವೆ ಇದೀಗ ಕಾಮಾಂಧರು ಪಶುಗಳ ಮೇಲೆ ತಮ್ಮ ಕಾಮತೃಷೆಯನ್ನು ತೀರಿಸಿಕೊಳ್ಳುತ್ತಿದ್ದಾರೆ. 
ಮಧ್ಯಪ್ರದೇಶದ ರಾಜಗಢ ಜಿಲ್ಲೆಯಲ್ಲಿ ಹಸುವಿನ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 80 ವರ್ಷದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. 
ಸುತಾಲಿಯಾ ಗ್ರಾಮದಲ್ಲಿ ಕಳೆದ ವಾರವೇ ವ್ಯಕ್ತಿಯನ್ನು ಬಂಧಿಸಲಾಗಿದ್ದು ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಇನ್ನು ಬಂಧಿತನ ಕುಟುಂಬಸ್ಥರು ಈ ಆರೋಪವನ್ನು ತಳ್ಳಿ ಹಾಕಿದ್ದು ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಸುಳ್ಳು ದೂರ ದಾಖಲಿಸಲಾಗಿದೆ ಎಂದು ಪೊಲೀಸರಿಗೆ ತಿಳಿಸಿದ್ದಾರೆ. 
ಪ್ರಕರಣ ಸಂಬಂಧ ತನಿಖೆ ನಡೆಸಿ ನಂತರ ಮುಂದಿನ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com