
ಚೆನ್ನೈ : ಮರೀನಾ ಬೀಚ್ ನಲ್ಲಿ ಕರುಣಾನಿಧಿ ಅಂತಿಮ ಸಂಸ್ಕಾರಕ್ಕೆ ಸ್ಥಳ ನೀಡಲು ತಮಿಳುನಾಡು ಎಐಎಡಿಎಂಕೆ ಸರ್ಕಾರ ನಿರಾಕರಿಸಿದ್ದು, ಏಲ್ಲಿ ಅಂತ್ಯಸಂಸ್ಕಾರ ಮಾಡಬೇಕೆಂಬ ಬಗ್ಗೆ ಇದೀಗ ತಮಿಳುನಾಡಿನಲ್ಲಿ ರಾಜಕೀಯ ಆರಂಭವಾಗಿದೆ.
ಮರೀನಾ ಬೀಚ್ ಬದಲಿಗೆ ಗಿಂಡಿ ಪ್ರದೇಶದಲ್ಲಿ ಅಂತ್ಯಸಂಸ್ಕಾರ ಮಾಡಲು ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಸರ್ಕಾರ ಜಾಗ ನೀಡಿದೆ. ಮರೀನಾ ಬೀಚ್ ನಲ್ಲಿನ ಸ್ಮಾರಕಗಳ ಸಂಬಂದ ಹಲವು ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿದ್ದು, ಗಾಂಧಿ ಮಂಟಪದ ಬಳಿ ಕರುಣಾನಿಧಿ ಅಂತ್ಯಸಂಸ್ಕಾರಕ್ಕೆ ಸ್ಥಳವಕಾಶ ಮಾಡಿಕೊಡುವುದಾಗಿ ಸರ್ಕಾರದ ಅಧಿಕೃತ ಮಾಹಿತಿಯಲ್ಲಿ ತಿಳಿಸಲಾಗಿದೆ.
Advertisement