ದೇಶ

ಮುಂಬೈ ಬಿಪಿಸಿಎಲ್ ಘಟಕದಲ್ಲಿ ಅಗ್ನಿ ಅವಘಡ, ಕನಿಷ್ಠ 43 ಮಂದಿಗೆ ಗಾಯ

ಮುಂಬೈನಲ್ಲಿರುವ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟಿಡ್(ಬಿಪಿಸಿಎಲ್) ಸಂಸ್ಕರಣಾ ಘಟಕದಲ್ಲಿ ಬುಧವಾರ...

ಮುಂಬೈ ಬಿಪಿಸಿಎಲ್ ಘಟಕದಲ್ಲಿ ಅಗ್ನಿ ಅವಘಡ, ಕನಿಷ್ಠ 43 ಮಂದಿಗೆ ಗಾಯ
ಬಿಪಿಸಿಎಲ್
Published On :
ಮುಂಬೈ: ಮುಂಬೈನಲ್ಲಿರುವ ಭಾರತ್ ಪೆಟ್ರೋಲಿಯಂ ಕಾರ್ಪೋರೇಷನ್ ಲಿಮಿಟಿಡ್(ಬಿಪಿಸಿಎಲ್) ಸಂಸ್ಕರಣಾ ಘಟಕದಲ್ಲಿ ಬುಧವಾರ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಠ 43 ಮಂದಿ ಗಾಯಗೊಂಡಿದ್ದಾರೆ.
ಇಂದು ಮಧ್ಯಾಹ್ನ 2.55ರ ಸುಮಾರಿಗೆ ಚೆಂಬೂರ್ ನ ಮಹಲ್ ಗಾಂವ್ ನಲ್ಲಿರುವ ಬಿಪಿಸಿಎಲ್ ಘಟಕದಲ್ಲಿ ಅವಘಡ ಸಂಭವಿಸಿದೆ. ಸ್ಥಳಕೆ ಒಂಬತ್ತು ಅಗ್ನಿ ಶಾಮಕ ವಾಹನಗಳು ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗುತ್ತಿದೆ.
ಗಾಯಾಳುಗಳ ಪೈಕಿ 22 ಕಾರ್ಮಿಕರಿಗೆ ಬಿಪಿಸಿಎಲ್ ಪ್ರಾಥಮಿಕ ಚಿಕಿತ್ಸಾ ಕೇಂದ್ರದಲ್ಲೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಲಾಗಿದೆ. ಇನ್ನು 21 ಮಂದಿಯ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆಂಬೂರ್ ನಲ್ಲಿರುವ ಇಂಡೇಕ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಓರ್ವನ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಐಸಿಯುಗೆ ದಾಖಲಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.