ಕರುಣಾನಿಧಿ ಅವರ ನಿಧನದ ಬೆನ್ನಲ್ಲೇ, ಅವರ ಅಂತ್ಯಸಂಸ್ಕಾರದ ವಿಚಾರ ವಿವಾದ ಕಾರಣವಾಗಿತ್ತು. ತಮಿಳುನಾಡು ಸರ್ಕಾರ ಕಾನೂನು ತೊಡಕಿನ ಕಾರಣ ನೀಡಿ ಮರೀನಾ ಬೀಚ್‌ನಲ್ಲಿ ಅಂತ್ಯಸಂಸ್ಕಾರಕ್ಕೆ ಅವಕಾಶ ನೀಡಲು ನಿರಾಕರಿಸಿತ್ತು. ಆದರೆ ಸರ್ಕಾರದ ನಿರ್ಧಾರ ಪ್ರಶ್ನಿಸಿ ಡಿಎಂಕೆ ಮುಖಂಡರು ಮದ್ರಾಸ್ ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಮರೀನಾ ಬೀಚ್ ನಲ್ಲೇ ಕರುಣಾನಿಧಿ ಅವರ ಅಂತ್ಯಕ್ರಿಯೆ ನಡೆಸಬಹುದು ಎಂದು ಮಹತ್ವದ ತೀರ್ಪು ನೀಡಿತ್ತು.