ಡಿಎಂಕೆ ಮುಖ್ಯಸ್ಥ ಕರುಣಾನಿಧಿ ನಿಧನಕ್ಕೆ ಶ್ರೀಲಂಕಾ ಗಣ್ಯರಿಂದ ಸಂತಾಪ

ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅವರ ನಿಧನಕ್ಕೆ ಶ್ರೀಲಂಕಾದ ...
ಕರುಣಾನಿಧಿ
ಕರುಣಾನಿಧಿ
Updated on: 
ಕೊಲಂಬೊ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅವರ ನಿಧನಕ್ಕೆ ಶ್ರೀಲಂಕಾದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಹಿರಿಯ ರಾಜಕಾರಣಿ ಕರುಣಾನಿಧಿ ಅವರ ನಿಧನದಿಂದ ಬೇಸರವಾಗಿದೆ. ಅಣ್ಣನನ್ನು ಕಳೆದುಕೊಂಡಿರುವ ಅವರ ಕುಟುಂಬ ಮತ್ತು ಅಭಿಮಾನಿಗಳ ಬಗ್ಗೆ ಸಹಾನುಭೂತಿ ಇದೆ ಎಂದು ಸಿರಿಸೇನಾ ಅವರು ಟ್ವೀಟ್ ಮಾಡಿದ್ದಾರೆ.
ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್ ಅವರಿಗೆ ಕರೆ ಮಾಡಿ,  ತಮಿಳುನಾಡು ಮಾಜಿ ಸಿಎಂ ನಿಧನಕ್ಕೆ ಸಂತಾಪ ಸೂಚಿಸಿರುವುದಾಗಿ ಶ್ರೀಲಂಕಾ ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ತಿಳಿಸಿದ್ದಾರೆ.
ಇನ್ನು ಶ್ರೀಲಂಕಾ ಮಾಜಿ ಅಧ್ಯಕ್ಷ ಮಹಿಂದಾ ರಾಜಪಕ್ಷ ಅವರು ಕಲೈನಾರ್ ನಿಧನಕ್ಕೆ ಸಂತಾಪ ಸೂಚಿಸಿದ್ದು, ತಮಿಳು ಸಾಹಿತ್ಯ, ಸಿನಿಮಾ ಮತ್ತು ರಾಜಕೀಯಕ್ಕೆ ಕರುಣಾನಿಧಿ ಅವರ ಕೊಡುಗೆ ಅಪಾರ. ಅವರ ನಿಧನಕ್ಕೆ ಕಂಬನಿಮಿಡಿಯುತ್ತಿರುವ ಲಕ್ಷಾಂತರ ಜನರಲ್ಲಿ ನಾನು ಒಬ್ಬ ಎಂದು ಟ್ವೀಟ್ ಮಾಡಿದ್ದಾರೆ.
ತಮಿಳರು ಹೆಚ್ಚಿನ ಸಂಖ್ಯೆಯಲ್ಲಿರುವ ಶ್ರೀಲಂಕಾದ ಉತ್ತರ ಪ್ರಾಂತ್ಯದ ಮುಖ್ಯಮಂತ್ರಿ ಸಿವಿ ವಿಘ್ನೇಶ್ವರನ್ ಅವರು ಸಹ ಕರುಣಾನಿಧಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com