ಕರುಣಾನಿಧಿ ನಿಧನಕ್ಕೆ ರಾಜ್ಯಸಭೆ, ಲೋಕಸಭೆ ಶ್ರದ್ಧಾಂಜಲಿ; ಕಲಾಪ ನಾಳೆಗೆ ಮುಂದೂಡಿಕೆ

ಡಿಎಂಕೆ ಅಧಿನಾಯಕ ಮತ್ತು ತಮಿಳುನಾಡು ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ನಡೆಯುತ್ತಿದ್ದ ಮುಂಗಾರು ಅಧಿವೇಶನದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಡಿಎಂಕೆ ಅಧಿನಾಯಕ ಮತ್ತು ತಮಿಳುನಾಡು ರಾಜ್ಯದ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ನಿಧನ ಹೊಂದಿರುವ ಹಿನ್ನಲೆಯಲ್ಲಿ ರಾಜ್ಯಸಭೆ ಹಾಗೂ ಲೋಕಸಭೆಯಲ್ಲಿ ನಡೆಯುತ್ತಿದ್ದ ಮುಂಗಾರು ಅಧಿವೇಶನದ ಕಲಾಪವನ್ನು ಗುರುವಾರಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ. 
ಮಾಜಿ ಮುಖ್ಯಮಂತ್ರಿ ಕರುಣಾನಿಧಿಯವರಿಗೆ ಒಂದು ನಿಮಿಷಗಳ ಮೌನಾಚರಣೆ ಮಾಡುವ ಮೂಲಕ ಗೌರವ ಸಲ್ಲಿಸಿದ ರಾಜ್ಯಸಭೆ ಹಾಗೂ ಲೋಕಸಭೆ ಕಲಾಪವನ್ನು ನಾಳೆಗೆ ಮುಂದೂಡಿತು. 
11 ದಿನಗಳಿಂದ ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕರುಣಾನಿಧಿಯವರು ನಿನ್ನೆ ಸಂಜೆ 6.10ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಕರುಣಾನಿಧಿಯವರ ಅಗಲಿಕೆ ಅಸಂಖ್ಯಾತ ಡಿಎಂಕೆ ಕಾರ್ಯಕರ್ತರನ್ನು ಶೋಕಸಾಗರದಲ್ಲಿ ದೂಡಿದೆ. 
ಕಾವೇರಿ ಆಸ್ಪತ್ರೆಯಲ್ಲಿ ನಿಧನರಾದ ಕರುಣಾನಿಧಿಯವರ ಪಾರ್ಥೀವ ಶರೀರವನ್ನು ರಾತ್ರಿ ಅವರ ಮನೆಗೆ ಕೊಂಡೊಯ್ಯಲಾಯಿತು. ಬಳಿಕ ಇಂದು ಮುಂಜಾನೆ 4 ಗಂಟೆ ವೇಳೆಗೆ ದೇಹವನ್ನು ಸಾರ್ವಜನಿಕರ ದರ್ಶನಕ್ಕಾಗಿ ರಾಜಾಜಿ ಹಾಲ್'ಗೆ ತರಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com