2019ರ ಲೋಕಸಭಾ ಚುನಾವಣೆ : ಪ್ರತಿಪಕ್ಷಗಳ ಮೈತ್ರಿಗೆ ಎಎಪಿ ಸೇರಲ್ಲ- ಕೇಜ್ರಿವಾಲ್

2019ರ ಲೋಕಸಭಾ ಚುನಾವಣೆಯಲ್ಲಿ ಪ್ರತಿಪಕ್ಷಗಳ ಮೈತ್ರಿಗೆ ಎಎಪಿ ಸೇರುವುದಿಲ್ಲ ಎಂದು ಎಎಪಿ ಮುಖಂಡ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್

ನವದೆಹಲಿ: 2019ರ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರಮೋದಿ ಅವರನ್ನು  ಅಧಿಕಾರದಿಂದ  ದೂರ ಇಡುವ ನಿಟ್ಟಿನಲ್ಲಿ ಪ್ರತಿಪಕ್ಷಗಳ ಮಹಾಮೈತ್ರಿ ರಚಿಸಿಕೊಳ್ಳಲು ಮುಂದಾಗಿರುವಂತೆ ಈ ಮೈತ್ರಿಗೆ ಎಎಪಿ ಸೇರುವುದಿಲ್ಲ ಎಂದು  ಎಎಪಿ ಮುಖಂಡ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಮಹಾಮೈತ್ರಿಗೆ ಮುಂದಾಗಿರುವ ಪಕ್ಷಗಳು  ದೇಶದ ಅಭಿವೃದ್ದಿಯಲ್ಲಿ ಯಾವುದೇ  ಪಾತ್ರ ವಹಿಸಿಲ್ಲ ಎಂದು ಅವರು ಹೇಳಿದ್ದು, 2019ರ ಲೋಕಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷದೊಂದಿಗೆ ಆಮ್ ಆದ್ಮಿ ಪಕ್ಷ ಸೇರಿಕೊಳ್ಳುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಹರಿಯಾಣ ವಿಧಾನಸಭಾ ಕ್ಷೇತ್ರ ಚುನಾವಣೆ ಹಾಗೂ ಲೋಕಸಭಾ ಚುನಾವಣೆಯ ಎಲ್ಲಾ  ಕ್ಷೇತ್ರಗಳಲ್ಲಿಯೂ  ಎಎಪಿ ಸ್ಪರ್ಧಿಸಲಿದೆ ಎಂದು ಅವರು ಹೇಳಿದ್ದಾರೆ.

ಪ್ರಧಾನಿ ನರೇಂದ್ರಮೋದಿ ನೇತೃತ್ವದ ಕೇಂದ್ರಸರ್ಕಾರ ದೆಹಲಿಯಲ್ಲಿ ಅಭಿವೃದ್ದಿ ಕಾರ್ಯಗಳನ್ನು  ಪೂರ್ಣಗೊಳಿಸಿಲ್ಲ ಎಂದು ಆರೋಪಿಸಿದ ಕೇಜ್ರಿವಾಲ್, ಜನರ ಕಲ್ಯಾಣಕ್ಕಾಗಿ ಸರ್ಕಾರ ಕೈಗೊಳ್ಳುವ ಎಲ್ಲಾ ಯೋಜನೆಗಳಿಗೂ ಬಿಜೆಪಿ ಅಡ್ಡಚಣೆ ಉಂಟುಮಾಡುತ್ತಿದೆ ಎಂದು ಆರೋಪಿಸಿದರು.

 ದೆಹಲಿಯಲ್ಲಿ ಶಿಕ್ಷಣ ಹಾಗೂ  ಆರೋಗ್ಯ ವಲಯದಲ್ಲಿ ಕ್ರಾಂತಿಕಾರಿ ಕೆಲಸಗಳನ್ನು ಕ್ಷೀಪ್ರಗತಿಯಲ್ಲಿ ಕೈಗೊಳ್ಳಲಾಗಿದೆ. ಅಭಿವೃದ್ದಿಯಲ್ಲಿ ದೆಹಲಿಗೆ ಹೋಲಿಸಿದರೆ ಹರಿಯಾಣ ಹಿಂದೆ ಬಿದ್ದಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com