ತ್ರಿವಳಿ ತಲಾಖ್ ಮಸೂದೆ ತಿದ್ದುಪಡಿಗೆ ಕೇಂದ್ರ ಸಂಪುಟ ಅಸ್ತು

ತ್ರಿವಳಿ ತಲಾಖ್ ಮಸೂದೆ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದ್ದು, ಮ್ಯಾಜಿಸ್ಟ್ರೇಟ್ ರಿಂದ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ತ್ರಿವಳಿ ತಲಾಖ್ ಮಸೂದೆ ತಿದ್ದುಪಡಿಗೆ ಕೇಂದ್ರ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದ್ದು, ಮ್ಯಾಜಿಸ್ಟ್ರೇಟ್ ರಿಂದ ಜಾಮೀನು ಪಡೆಯಲು ಅವಕಾಶ ನೀಡಲಾಗಿದೆ.
ಇನ್ನು ತ್ರಿವಳಿ ತಲಾಖ್ ಅಪರಾಧ ಜಾಮೀನು ರಹಿತವಾಗಿದ್ದರೂ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ನೀಡಬಹುದಾಗಿದೆ.
ಸುಪ್ರೀಂ ಕೋರ್ಟ್ ತ್ರಿವಳಿ ತಲಾಖ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿದ್ದು, ಅದನ್ನು ಕಾನೂನಾತ್ಮಕವಾಗಿ ಸಂಪೂರ್ಣ ತೆಗೆದು ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ತ್ರಿವಳಿ ತಲಾಖ್ ತಿದ್ದುಪಡಿ ಮಸೂದೆಯನ್ನು ಕಳೆದ ಡಿಸೆಂಬರ್ ನಲ್ಲಿ ಲೋಕಸಭೆಯಲ್ಲಿ ಅಂಗೀಕರಿಸಿದೆ.
ಮೂರು ಸಲ ತಲಾಖ್ ಎಂದು ಹೇಳಿ ವಿಚ್ಛೇದನ ನೀಡುವ ಮುಸ್ಲಿಂ ವ್ಯಕ್ತಿಗೆ ಮೂರು ವರ್ಷದ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವ ಈ ಮಸೂದೆಯಲ್ಲಿದೆ.
ಲೋಕಸಭೆಯಲ್ಲಿ ಅಂಗೀಕಾರ ಆಗಿರುವ ಈ ಮಸೂದೆ ಇನ್ನೂ ರಾಜ್ಯಸಭೆಯಲ್ಲಿ ಒಪ್ಪಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com