ಆರುಷಿ ಕೊಲೆ ಪ್ರಕರಣ: ತಲ್ವಾರ್​ ದಂಪತಿ ನಿರ್ದೋಷಿ ತೀರ್ಪು ವಿರೋಧದ ಅರ್ಜಿ ವಿಚಾರಣೆಗೆ ಸುಪ್ರೀಂ ಸಮ್ಮತಿ

ತಮ್ಮ ಪುತ್ರಿ ಆರುಷಿ ಹಾಗೂ ಮನೆ ಕೆಲಸದ ಸಹಾಯಕ ಹೇಮರಾಜ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ...
ತಲ್ವಾರ್​ ದಂಪತಿ
ತಲ್ವಾರ್​ ದಂಪತಿ
ದೆಹಲಿ: ತಮ್ಮ ಪುತ್ರಿ ಆರುಷಿ ಹಾಗೂ ಮನೆ ಕೆಲಸದ ಸಹಾಯಕ ಹೇಮರಾಜ್ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ನಂತರ ಖುಲಾಸೆಗೊಂಡಿರುವ ದಂತವೈದ್ಯ ದಂಪತಿ ರಾಜೇಶ್​ ತಲ್ವಾರ್​ ಮತ್ತು ನೂಪುರ್​ ತಲ್ವಾರ್​ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ.
ಜೋಡಿ ಕೊಲೆ ಪ್ರಕರಣದಲ್ಲಿ ತಲ್ವಾರ್​ ದಂಪತಿಯನ್ನು ಖುಲಾಸೆಗೊಳಿಸಿದ್ದ ಅಲಹಾಬಾದ್​ ಹೈಕೋರ್ಟ್​ ತೀರ್ಪು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಗೆ ಸುಪ್ರೀಂ ಕೋರ್ಟ್​ ಶುಕ್ರವಾರ ಸಮ್ಮತಿಸಿದೆ.
ಸಿಬಿಐ ಸಲ್ಲಿಸಿರುವ ಮೇಲ್ಮನವಿಯ ಜೊತೆಗೆ ಮೃತ ಹೇಮರಾಜ್​ ಪತ್ನಿ ಕಮಲಾ ಬಂಜದೆ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮಾಡುವುದಾಗಿ ನ್ಯಾಯಮೂರ್ತಿ ರಂಜನ್ ಗೋಗೊಯ್ ನೇತೃತ್ವದ ಸುಪ್ರೀಂ ಪೀಠ ತಿಳಿಸಿದೆ. ಈ ಹಿನ್ನೆಲೆಯಲ್ಲಿ ತಲ್ವಾರ್​ ದಂಪತಿಗೆ ಸುಪ್ರೀಂ ಕೋರ್ಟ್​ ನೋಟಿಸ್ ಸಹ​ ಜಾರಿ ಮಾಡಿದೆ.
ಆರುಷಿ ಹಾಗೂ ಹೇಮರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯ 2013ರಲ್ಲಿ ದಂಪತಿಯನ್ನು ದೋಷಿಗಳೆಂದು ಘೋಷಿಸಿ ಜೀವಾವಧಿ ಶಿಕ್ಷೆ ನೀಡಿತ್ತು. ಆದರೆ ಕಳೆದ ವರ್ಷ ಅಕ್ಟೋಬರ್ 12ರಂದು ಅಲಹಬಾದ್ ಹೈಕೋರ್ಟ್ ತಲ್ವಾರ್​ ದಂಪತಿಯನ್ನು ಖುಲಾಸೆಗೊಳಿಸಿತ್ತು.
2008ರಲ್ಲಿ ನೋಯ್ಡಾದಲ್ಲಿ ನಡೆದಿದ್ದ ಆರುಷಿ ಹಾಗೂ ಮನೆ ಕೆಲಸದಾತ ಹೇಮರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ ರಾಜೇಶ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅಲಹಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಅಲ್ಲದೆ ರಾಜೇಶ್‌ ಮತ್ತು ನೂಪುರ್‌ ಅವರೇ ಈ ಜೋಡಿ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ರಾಜೇಶ್‌ ಮತ್ತು ನೂಪುರ್‌ ದಂಪತಿ ತಮ್ಮ ಮಗಳು ಮತ್ತು ಮನೆ ಕೆಲಸದ ಸಹಾಯಕ ಹೇಮರಾಜ್‌ ಕೊಲೆಯ ಹೊಣೆಗಾರರಲ್ಲ ಎಂದು ನ್ಯಾಯಪೀಠ ಹೇಳಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com