ಕಾಶ್ಮೀರದ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್ ಪ್ರಮಾಣ

Published On :
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟ್ ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಗೀತಾ ಮಿತ್ತಲ್ ಅವರು ಶನಿವಾರ ಪ್ರಮಾಣವಚನ ಸ್ವೀಕರಿಸಿದರು.
ಇಂದು ರಾಜಭವನದಲ್ಲಿ ರಾಜ್ಯಪಾಲ ಎನ್ ಎನ್ ವೊಹ್ರಾ ಅವರು ಗೀತಾ ಮಿತ್ತಲ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ದೆಹಲಿ ಹೈಕೋರ್ಟ್ ನಲ್ಲಿ ತಾತ್ಕಾಲಿಕ ಮುಖ್ಯ ನ್ಯಾಯಮೂರ್ತಿಯಾಗಿ ಕೆಲಸ ಮಾಡುತ್ತಿದ್ದ
ಗೀತಾ ಮಿತ್ತಲ್ ಅವರನ್ನು ಕಣಿವೆ ರಾಜ್ಯದ ಮುಖ್ಯ ನ್ಯಾಯಮೂರ್ತಿಯಾಗಿ ಆಗಸ್ಟ್ 4ರಂದು ನೇಮಕ ಮಾಡಲಾಗಿತ್ತು.
ಜುಲೈ 16 ರಂದು ಸುಪ್ರೀಂಕೋರ್ಟ್ ಕೊಲಿಜಿಯಂ ಜಮ್ಮು ಕಾಶ್ಮೀರ ಹೈಕೋರ್ಟ್ ಗೆ ಗೀತ್ ಮಿತ್ತಲ್ ಅವರ ಹೆಸರನ್ನು ಶಿಫಾರಸು ಮಾಡಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಜಮ್ಮು ಮತ್ತು ಕಾಶ್ಮೀರJammu and KashmirGita Mittalಗೀತಾ ಮಿತ್ತಲ್first woman Chief Justiceಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


