ಏಮ್ಸ್ಗೆ ತೆರಳಿ ವಾಜಪೇಯಿ ಆರೋಗ್ಯ ವಿಚಾರಿಸಿದ ರಾಜನಾಥ್ ಸಿಂಗ್
ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಗೆ ಭೇಟಿ ನೀಡಿ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ವಿಚಾರಿಸಿದ್ದಾರೆ.
ಏಮ್ಸ್ಗೆ ತೆರಳಿ ವಾಜಪೇಯಿ ಆರೋಗ್ಯ ವಿಚಾರಿಸಿದ ರಾಜನಾಥ್ ಸಿಂಗ್
ನವದೆಹಲಿ: ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ಗೆ ಭೇಟಿ ನೀಡಿ ಭಾರತದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ವಿಚಾರಿಸಿದ್ದಾರೆ.
ಕಳೆದ ಕೆಲ ವರ್ಷಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿರುವ ವಾಜಪೇಯಿ ಜೂನ್ 11ರಂದು ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇದಕ್ಕೂ ಮುನ್ನ ಏಮ್ಸ್ ವೈದ್ಯರ ತಂಡ ವಾಜಪೇಯಿ ಆರೋಗ್ಯದಲ್ಲಿ ಸುಧಾರಣೆಯಾಗಿದೆ.ವೈದ್ಯರ ತಂಡದ ಮೇಲ್ವಿಚಾರಣೆ ಮುಂದುವರಿದಿದೆ ಎಂದು ಹೇಳಿತ್ತು.
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ, ಹಿರಿಯ ನಾಯಕ ಎಲ್.ಕೆ. ಆಡ್ವಾಣಿ, ಭಾರತೀಯ ಜನತಾ ಪಕ್ಷದ ಮುಖ್ಯಸ್ಥ ಅಮಿತ್ ಷಾ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಸಹ ಏಮ್ಸ್ ತೆರಳಿ ವಾಜಪೇಯಿ ಆರೋಗ್ಯ ವಿಚಾರಿಸಿದ್ದರು.
93 ವರ್ಷದ ವಾಜಪೇಯಿ ಅವರಿಗೆ ಡಾ. ರಣದೀಪ್ ಗುಲೇರಿಯಾ ಅವರ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ಒದಗಿಸುತ್ತಿದೆ.