ಹತ್ತು ಬಾರಿ ಲೋಕಸಭೆಗೆ ಆಯ್ಕೆಯಾಗಿರುವ ಸೋಮನಾಥ ಚಟರ್ಜಿ 13ನೇ ಲೋಕಸಭೆಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಕಳೆದ ಜುಲೈನಲ್ಲಿ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚೇತರಿಸಿಕೊಂಡಿದ್ದರು. ಆದರೆ, ಒಂದೇ ತಿಂಗಳ ಅಂತರದಲ್ಲಿ ಮತ್ತೆ ಅನಾರೋಗ್ಯಕ್ಕೀಡಾಗಿದ್ದಾರೆ. ಎಡರಂಗದ ಅಗ್ರಮಾನ್ಯ ನಾಯಕರೆನಿಸಿಕೊಂಡಿದ್ದ ಸೋಮನಾಥ ಚಟರ್ಜಿ ಅವರನ್ನು 2008ರಲ್ಲಿ ಸಿಪಿಎಂನಿಂದ ಉಚ್ಚಾಟಿಸಲಾಗಿತ್ತು.