ಕೇರಳ ಮಳೆ: ರಾಜ್ಯ ಗಂಭೀರ ಪರಿಸ್ಥಿತಿ ಎದುರಿಸುತ್ತಿದೆ- ವೈಮಾನಿಕ ಸಮೀಕ್ಷೆ ನಡೆಸಿದ ಗೃಹ ಸಚಿವ ರಾಜನಾಥ್ ಸಿಂಗ್

ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಪ್ರವಾಹ ಸ್ಥಿತಿ ಉಂಟಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ.
ರಾಜನಾಥ್ ಸಿಂಗ್
ರಾಜನಾಥ್ ಸಿಂಗ್
ತಿರುವನಂತಪುರಂ: ಕೇರಳದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಜಲಪ್ರವಾಹ ಸ್ಥಿತಿ ಉಂಟಾಗಿದ್ದು, ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. 
ಎರ್ನಾಕುಲಂ, ಇಡುಕ್ಕಿ ಜಿಲ್ಲೆಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿರುವ ರಾಜನಾಥ್ ಸಿಂಗ್, ರಾಜ್ಯದ ಜನತೆ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ ಎಂದು ಹೇಳಿದ್ದಾರೆ.  ಪ್ರವಾಹ ಪೀಡಿತ ರಾಜ್ಯಕ್ಕೆ ಕೇಂದ್ರದಿಂದ ಎಲ್ಲಾ ರೀತಿಯ ನೆರವನ್ನೂ ನೀಡಲಾಗುವುದು ಎಂದು ರಾಜನಾಥ್ ಸಿಂಗ್ ಭರವಸೆ ನೀಡಿದ್ದಾರೆ.  ಪ್ರವಾಹದಲ್ಲಿ ನೆಲೆ ಕಳೆದುಕೊಂಡವರ ಸಮಸ್ಯೆಗಳನ್ನೂ ಇದೇ ವೇಳೆ ರಾಜನಾಥ್ ಸಿಂಗ್ ಆಲಿಸಿದ್ದಾರೆ. 
ಕೇರಳದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಹಲವು ಪ್ರದೇಶಗಳಲ್ಲಿ ಭೂಕುಸಿತವೂ ಉಂಟಾಗಿದೆ. ಇನ್ನು ಇಡುಕ್ಕಿ ಹಾಗೂ ಇಡಮಲಯಾರ್ ಜಲಾಶಯಗಳಲ್ಲಿ ನೀರಿನ ಮಟ್ಟ ತಗ್ಗಿದೆ ಎಂದು ಅಧಿಕಾರಿಗಳು ತಿಳಿಸಿದ್ದು ಈ ಭಾಗದ ಜನರು ಆತಂಕಪಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com