ಇಮ್ರಾನ್ ಖಾನ್ ನೇತೃತ್ವದ ಪಾಕಿಸ್ತಾನದಲ್ಲಿ ಭಯೋತ್ಪಾದನೆ ನಿಯಂತ್ರಣಕ್ಕೆ: ಪ್ರಧಾನಿ ಮೋದಿ ವಿಶ್ವಾಸ

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಇಮ್ರಾನ್ ಖಾನ್ ಅವರ ನೇತೃತ್ವದ ಸರ್ಕಾರ ಭಯೋತ್ಪಾದನೆಯನ್ನು ಮತ್ತು ಪಾಕಿಸ್ತಾನದ ಆಂತರಿಕ ಹಿಂಸಾಚಾರವನ್ನು ನಿಯಂತ್ರಿಸುತ್ತದೆ ಎಂಬ ವಿಶ್ವಾಸ ತಮಗಿದೆ ಎಂದು ಪ್ರಧಾನಿ ನರೇಂದ್ರ್ ಮೋದಿ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಇಮ್ರಾನ್ ಖಾನ್ ಅವರ ನೇತೃತ್ವದ ಸರ್ಕಾರ ಭಯೋತ್ಪಾದನೆಯನ್ನು ಮತ್ತು ಪಾಕಿಸ್ತಾನದ ಆಂತರಿಕ ಹಿಂಸಾಚಾರವನ್ನು ನಿಯಂತ್ರಿಸುತ್ತದೆ ಎಂಬ ವಿಶ್ವಾಸ ತಮಗಿದೆ ಎಂದು ಪ್ರಧಾನಿ ನರೇಂದ್ರ್ ಮೋದಿ ಹೇಳಿದ್ದಾರೆ.
ಸುದ್ದಿ ಸಂಸ್ಥೆಯೊಂದು ನಡೆಸಿದ ಸಂದರ್ಶನದಲ್ಲಿ ಪಾಕಿಸ್ತಾನ ಮತ್ತು ಭಾರತದ ಸಂಬಂಧದ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಪಾಕಿಸ್ತಾನದ ನೂತನ ಪ್ರಧಾನಮಂತ್ರಿಯಾಗಿ ಆಯ್ಕೆಯಾಗಿರುವ ಇಮ್ರಾನ್ ಖಾನ್ ಅವರಿಗೆ ಅಭಿನಂದಿಸಿದರು. ಬಳಿಕ ನೆರೆಯ ದೇಶಗಳೊಂದಿಗೆ ಉತ್ತಮ ಸಂಬಂಧ ಹೊಂದುವ ಅಗತ್ಯವಿದೆ. ಪಾಕಿಸ್ತಾನವು ಸುರಕ್ಷಿತ, ಸ್ಥಿರ, ಭಯೋತ್ಪಾದನೆ/ಹಿಂಸಾಚಾರ ಮುಕ್ತ ದೇಶ ಹಾಗೂ ಸಮೃದ್ದಿಗಾಗಿ ಶ್ರಮಿಸಲಿದೆ ಎಂಬ ನಂಬಿಕೆ ತಮಗಿದೆ ಎಂದು ಹೇಳಿದರು.
ಪಾಕಿಸ್ತಾನ ಚುನಾವಣಾ ಫಲಿತಾಂಶ ಮುಕ್ತಾಯದ ಬೆನ್ನಲ್ಲೇ ಜುಲೈ 30ರಂದು ಇಮ್ರಾನ್ ಖಾನ್ ಅವರಿಗೆ ಕರೆ ಮಾಡಿದ್ದ ಪ್ರಧಾನಿ ಮೋದಿ ಶುಭ ಕೋರಿದ್ದರು. ಅಲ್ಲದ ನೂತನ ಸರ್ಕಾರದ ಅಡಿಯಲ್ಲಿ ಪ್ರಜಾಪ್ರಭುತ್ವ ಮತ್ತಷ್ಟು ಬಲಗೊಳ್ಳುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. 
ಕಳೆದ ಜುಲೈ 25ರಂದು ನಡೆದಿದ್ದ ಪಾಕಿಸ್ತಾನ ಸಾರ್ವತ್ರಿಕ ಚುನಾವಣೆಯಲ್ಲಿ ಇಮ್ರಾನ್ ಖಾನ್ ನೇತತ್ವದ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷ 115 ಸ್ಥಾನಗಳನ್ನು ಪಡೆದು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಇದೀಗ ಮೈತ್ರಿ ಪಕ್ಷಗಳೊಂದಿಗೆ ಸೇರಿ ನೂತನ ಸರ್ಕಾರ ರಚನೆಯಲ್ಲಿ ತೊಡಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com