ಇಮ್ರಾನ್ ಖಾನ್ ಪದಗ್ರಹಣ ಸಮಾರಂಭಕ್ಕೆ ಸಿಧು ಹೋದರೆ ದೇಶದ್ರೋಹಿ ಎಂದು ಪರಿಗಣನೆ: ಸ್ವಾಮಿ

ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟರ್ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ತೆರಳಿದ್ದೇ ...
ಸುಬ್ರಮಣಿಯನ್ ಸ್ವಾಮಿ
ಸುಬ್ರಮಣಿಯನ್ ಸ್ವಾಮಿ
Updated on: 
ನವದೆಹಲಿ: ಪಾಕಿಸ್ತಾನ ಪ್ರಧಾನಿಯಾಗಿ ಇಮ್ರಾನ್ ಖಾನ್ ಪ್ರಮಾಣವಚನ ಸಮಾರಂಭಕ್ಕೆ ಮಾಜಿ ಕ್ರಿಕೆಟರ್ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ತೆರಳಿದ್ದೇ ಆದರೇ ದೇಶದ್ರೋಹಿ ಎಂದು ಪರಿಗಣಿಸುವ ಜನತೆ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಹೇಳಿದ್ದಾರೆ,
ನವದೆಹಲಿಯಲ್ಲಿ ಮಾಕತನಾಡಿದ ಅವರು, ಸಿಧು ಅವರ ಮಾನಸಿಕ ಸ್ಥಿತಿ ಸರಿಯಲ್ಲ ಎಂದು ನಾನು ಭಾವಿಸುತ್ತೇನೆ, ಒಂದು ವೇಳೆ ಅವರ ಮಾನಸಿಕ ಸ್ಥಿತಿ ಸರಿಯಿದ್ದರೇ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಸ್ವಾಮಿ ತಿಳಿಸಿದ್ದಾರೆ,
ಒಂದು ವೇಳೆ ನವಜೋತ್ ಸಿಂಗ್ ಸಿಧು ಪಾಕಿಸ್ತಾನಕ್ಕೆ ಹೋದರೇ ಅವರ ರಾಜಕೀಯ ಜೀವನದ ಮೇಲೆ ಬಹುದೊಡ್ಡ ಪರಿಣಾಮ ಬೀರುತ್ತದೆ, ಜನ ಅವರನ್ನು ದೇಶದ್ರೋಹಿ ಎಂದು ಪರಿಗಣಿಸುತ್ತಾರೆ, ಯಾವತ್ತೂ ಅವರನ್ನು ಕ್ಷಮಿಸುವುದಿಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನಕ್ಕೆ ತೆರಳಲು ಅನುಮತಿ ಕೋರಿ ಅರ್ಜಿ ಸಲ್ಲಿಸಿರುವುದಾಗಿ ಸಿಧು ಹೇಳಿದೆ ನಂತರ ಸುಬ್ರಮಣಿಯನ್ ಸ್ವಾಮಿ ಪ್ರತಿಕ್ರಿಯಿಸಿದ್ದಾರೆ,
ಆಗಸ್ಟ್ 18 ರಂದು ನಡೆಯುವ ಇಮ್ರಾನ್ ಖಾನ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಸಿದು, ಕಪಿಲ್ ದೇವ್, ಸೇರಿದಂತೆ ಹಲವು ಬಾಲಿವುಡ್ ತಾರೆಯರಿಗೆ ಆಹ್ವಾನ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com