ಪಾಕಿಸ್ತಾನ 71ನೇ ಸ್ವಾತಂತ್ರ್ಯ ದಿನಾಚರಣೆ: ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ
ದೇಶ
ಪಾಕಿಸ್ತಾನ 71ನೇ ಸ್ವಾತಂತ್ರ್ಯ ದಿನಾಚರಣೆ: ಅಟ್ಟಾರಿ-ವಾಘಾ ಗಡಿಯಲ್ಲಿ ಸಿಹಿ ವಿನಿಮಯ
ಪಾಕಿಸ್ತಾನ ರಾಷ್ಟ್ರದಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಗಡಿ ಪ್ರದೇಶದಲ್ಲಿರುವ ಉಭಯ ದೇಶಗಳ ಯೋಧರು ಸಿಹಿ ವಿನಿಮಯ ಮಾಡಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ...
ಅಟ್ಟಾರಿ: ಪಾಕಿಸ್ತಾನ ರಾಷ್ಟ್ರದಲ್ಲಿ 71ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ಗಡಿ ಪ್ರದೇಶದಲ್ಲಿರುವ ಉಭಯ ದೇಶಗಳ ಯೋಧರು ಸಿಹಿ ವಿನಿಮಯ ಮಾಡಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಗಡಿ ಪ್ರದೇಶದಲ್ಲಿ ಭಾರತ ಹಾಗೂ ಪಾಕಿಸ್ತಾನದ ರಾಷ್ಟ್ರಗಳ ಯೋಧರು ಸಿಹಿ ವಿನಿಮಯ ಮಾಡಿಕೊಳ್ಳುವುದು ವಾಡಿಕೆಯಾಗಿದ್ದು, ಪ್ರತೀ ವರ್ಷದಂತೆ ಈ ವರ್ಷ ಕೂಡ ಉಭಯ ರಾಷ್ಟ್ರಗಳು ಸಿಹಿ ವಿನಿಮಯ ಮಾಡಿಕೊಂಡಿವೆ.
ಸ್ವಾತಂತ್ರ್ಯ ದಿನಕ್ಕೆ ಕ್ಷಣಗಣನೆ ಎಣಿಸುತ್ತಿದ್ದ ಪಾಕಿಸ್ತಾನದ ಪ್ರಜೆಗಳು 12 ಗಂಟೆಯಾಗುತ್ತಿದ್ದಂತೆಯ ಪಟಾಕಿ ಸಿಡಿಸಿ ಸಂಭ್ರಮವನ್ನಾಚರಿಸಿದ್ದಾರೆ. ಸ್ವಾತಂತ್ರ್ಯ ದಿನ ಹಿನ್ನಲೆಯಲ್ಲಿ ಮಸೀದಿಗಳಿಗೆ ತೆರಳಿದ ಜನತೆ ಶಾಂತಿ, ಸೌಹಾರ್ದತೆ ಹಾಗೂ ಸಮೃದ್ಧಿ, ಕಾಶ್ಮೀರ ವಿವಾದಕ್ಕೆ ಶೀಘ್ರಗತಿಯಲ್ಲಿ ಪರಿಹಾರ ಕಂಡುಕೊಳ್ಳುವಂತೆ ಕೋರಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ