ಉತ್ತರ ಪ್ರದೇಶ: ಮದರಸಾದಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ

11 ವರ್ಷದ ಅಪ್ರಾಪ್ತೆ ಮೇಲೆ ಅತ್ಯಚಾರ ನಡೆಸಿದ ಆರೋಪದ ಮೇಲೆ ಮದರಸಾದ ಮ್ಯಾನೇಜರ್ ಸೇರಿ ಐವರ ವಿರುದ್ದ ದೂರು ದಾಖಲಾಗಿದೆ,...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಮಾವ್: 11 ವರ್ಷದ ಅಪ್ರಾಪ್ತೆ ಮೇಲೆ ಅತ್ಯಚಾರ ನಡೆಸಿದ ಆರೋಪದ ಮೇಲೆ ಮದರಸಾದ ಮ್ಯಾನೇಜರ್ ಸೇರಿ ಐವರ ವಿರುದ್ದ ದೂರು ದಾಖಲಾಗಿದೆ.
ಆಗಸ್ಟ್ 4 ರಂದು ಮದರಸಾ ಮ್ಯಾನೇಜರ್ ಸಹೋದರ ಮತ್ತು ನಾಲ್ವರು ಬಾಲಕಿಯನ್ನು ಕೂಡಿ ಹಾಕಿ ರೇಪ್ ಮಾಡಿದ್ದಾರೆ. ಎಂದು ಸಂತ್ರಸ್ತ ಬಾಲಕಿ ತಾಯಿ  ಆರೋಪಿಸಿದ್ದಾರೆ, ಪ್ರಮುಖ ಆರೋಪಿ ಸೆರೆಯಾಗಿದ್ದು ಉಳಿದ ಆರೋಪಿಗಳ ಬಂಧನಕ್ಕೆ  ಬಲೆ ಬೀಸಲಾಗಿದೆ.
ಆರೋಪಿಗಳು ಪೊಲೀಸರಿಗೆ ವಿಷಯ ತಿಳಿಸಿದಂತೆ ಬಾಲಕಿಗೆ ಬೆದರಿಕೆ ಒಡ್ಡಿದ್ದರು. ಜೊತೆಗೆ ಆಕೆಯ ಅಕ್ಷೇಪಾರ್ಹ ಫೋಟೋ ತೆಗೆದು ಬ್ಲ್ಯಾಕ್ ಮೇಲ್ ಮಾಡುತ್ತಿದ್ದರು ಎಂದು ಆರೋಪಿಸಲಾಗಿದೆ.
ಇನ್ನೂ ಈ ಸಂಬಂಧ ವರದಿ ನೀಡುವಂತೆ ರಾಜ್ಯ ಅಲ್ಪಸಂಖ್ಯಾತ ಇಲಾಖೆ ತಿಳಿಸಿದೆ. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ವರದಿಗಾಗಿ ಕಾಯಲಾಗುತ್ತಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com