72 ನೇ ಸ್ವಾತಂತ್ರ್ಯ ದಿನಾಚರಣೆ: ದೇಶದ ಹಲವೆಡೆ ವಿವಿಧ ಮುಖಂಡರುಗಳಿಂದ ರಾಷ್ಟ್ರಧ್ವಜ ಅನಾವರಣ

72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದ್ಯಾಂತ ಸಡಗರ- ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ದೇಶದ ಹಲವೆಡೆ ವಿವಿಧ ಪಕ್ಷಗಳ ನಾಯಕರು ತಮ್ಮ ಕಚೇರಿಯ ಮುಂದೆ ರಾಷ್ಟ್ರಧ್ವಜ ಅನಾವರಣಗೊಳಿಸಿದರು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ
Updated on
ನವದೆಹಲಿ: 72 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶದ್ಯಾಂತ ಸಡಗರ- ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ದೇಶದ ಹಲವೆಡೆ ವಿವಿಧ ಪಕ್ಷಗಳ ನಾಯಕರು ತಮ್ಮ ಕಚೇರಿಯ ಮುಂದೆ ರಾಷ್ಟ್ರಧ್ವಜ ಅನಾವರಣಗೊಳಿಸಿದರು.ದೆಹಲಿಯ ಎಐಸಿಸಿ ಕಚೇರಿ ಮುಂದೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಷ್ಟ್ರಧ್ವಜವನ್ನು ಅನಾವರಣಗೊಳಿಸಿದರು.
ಬಿಜೆಪಿ ಕೇಂದ್ರ ಕಚೇರಿ ಮುಂಭಾಗ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ತ್ರಿವರ್ಣ ಧ್ವಜವನ್ನು ಹಾರಿಸಿದರು.
ಬಿಜೆಪಿ ಹಿರಿಯ ಮುಖಂಡ ಎಲ್. ಕೆ. ಅಡ್ವಾಣಿ ತಮ್ಮ ನಿವಾಸದ ಮುಂದೆ ರಾಷ್ಟ್ರಧ್ವಜ ಅನಾವರಣಗೊಳಿಸಿದರು.
ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಷ್ಟ್ರಧ್ವಜ ಅನಾವರಣಗೊಳಿಸಿದರು.
ಆರ್ ಎಸ್ ಎಸ್ ಸರಸಂಚಾಲಕ ಮೋಹನ್ ಭಾಗವತ್ ಬೆಂಗಳೂರಿನ ರಾಷ್ಟ್ರೋತ್ಹಾನ  ವಿದ್ಯಾ ಕೇಂದ್ರ ಬಳಿ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com