ನವದೆಹಲಿ: ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರು ಪಕ್ಷದ ನಾಯಕ ಅಶುತೋಷ್ ಅವರ ರಾಜಿನಾಮೆಯನ್ನು ಅಂಗೀಕರಿಸಲು ನಿರಾಕರಿಸಿದ್ದಾರೆ.
ನಿಮ್ಮ ರಾಜಿನಾಮೆಯನ್ನು ಹೇಗೆ ಸ್ವೀಕರಿಸಲಿ? ಎಂದು ಟ್ವೀಟ್ ಮಾಡಿರುವ ಕೇಜ್ರಿವಾಲ್ ಅವರು, ಅದು ಈ ಜನ್ಮದಲ್ಲೇ ಸಾಧ್ಯವೆ ಇಲ್ಲ ಎಂದು ಹೇಳಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಆಶುತೋಷ್ ಅವರನ್ನು ತಬ್ಬಿಕೊಂಡಿರುವ ಫೋಟೋ ಪೋಸ್ಟ್ ಮಾಡಿ, ಸರ್, ನಾವು ನಿಮ್ಮನ್ನು ತುಂಬಾ ಪ್ರೀತಿಸುತ್ತೇವೆ ಎಂದು ಹೇಳಿದ್ದಾರೆ.
ಇಂದು ಬೆಳಗ್ಗೆಯಷ್ಟೇ ಆಪ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜಿನಾಮೆ ನೀಡಿದ್ದ ಆಶುತೋಷ್ ಅವರು, ವೈಯಕ್ತಿಕ ಕಾರಣಗಳಿಂದಾಗಿ ರಾಜಿನಾಮೆ ನೀಡಿದ್ದೇನೆ. ತಮ್ಮ ಚಿಂತನೆಗಳನ್ನು ಬೆಂಬಲಿಸಿದ ಎಲ್ಲರನ್ನು ಅಭಿನಂದಿಸುವುದಾಗಿ ಹೇಳಿದ್ದರು.