ಆಯುಷ್ಮಾನ್ ಭಾರತ್ ಯೋಜನೆ ಘೋಷಣೆ, 50 ಕೋಟಿ ಜನರಿಗೆ ಪ್ರಯೋಜನ: ಪ್ರಧಾನಿ ಮೋದಿ

72ನೇ ಸ್ವಾತಂತ್ರ್ಯದಿನಾಚರಣೆ ಅಂಗವಾಗಿ ಕೆಂಪುಕೋಟೆ ಮೇಲೆ ನಾಲ್ಕನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ್
ನರೇಂದ್ರ ಮೋದಿ
ನರೇಂದ್ರ ಮೋದಿ
ನವದೆಹಲಿ: 72ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೆಂಪುಕೋಟೆ ಮೇಲೆ ನಾಲ್ಕನೇ ಬಾರಿಗೆ ಧ್ವಜಾರೋಹಣ ಮಾಡಿದ ಪ್ರಧಾನಿ ನರೇಂದ್ರ ಮೋದಿ ಅವರು ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. 
ಕೆಂಪುಕೋಟೆಯಲ್ಲಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಅವರು, ಆಯುಷ್ಮಾನ್ ಭಾರತ್ ಯೋಜನೆಯನ್ನು ಘೋಷಣೆ ಮಾಡಿದರು. ಇದೇ ವೇಳೆ ದೇಶದ ಜನತೆ ಆರೋಗ್ಯವಾಗಿರಬೇಕು ಎಂಬ ದೃಷ್ಟಿಯಿಂದ ಪ್ರಧಾನಮಂತ್ರಿ ಜನ ಆರೋಗ್ಯ ಅಭಿಯಾನ ಘೋಷಣೆಯನ್ನು ಮಾಡಿದರು.
ಆಯುಷ್ಮಾನ್ ಭಾರತ್ ಯೋಜನೆಯಿಂದ ದೇಶದ 10 ಕೋಟಿ ಕುಟುಂಬ, 50 ಕೋಟಿ ಜನರಿಗೆ ಪ್ರಯೋಜನವಾಗಲಿದೆ. ಈ ಯೋಜನೆ ಮೂಲಕ ಗಂಭೀರ ಕಾಯಿಲೆಗಳಿಗೆ ತುತ್ತಾಗಿರುವ ಜನರಿಗೆ ಯಾವುದೇ ಆಸ್ಪತ್ರೆಯಲ್ಲಾದರೂ ಉಚಿತ ಚಿಕಿತ್ಸೆ ಸಿಗುತ್ತದೆ.
ಸೆಪ್ಟೆಂಬರ್ 25ರಿಂದ ಪ್ರಧಾನಮಂತ್ರಿ ಜನ ಆರೋಗ್ಯ ಅಭಿಯಾನ ಆರಂಭಿಸುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com