ಕೇರಳದಲ್ಲಿ ಭೀಕರ ಪ್ರವಾಹ: ಹೆಚ್ಚುವರಿ ನೆರವು ನೀಡುವಂತೆ ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಅಗ್ರಹ

ಕೇರಳ ರಾಜ್ಯದಲ್ಲಿ ಭೀಕರ ಪ್ರವಾಹ ಎದುರಾಗಿದ್ದು, ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚುವರಿ ನೆರವು ನೀಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಆಗ್ರಹಿಸಿದ್ದಾರೆ...
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ
Updated on: 
ನವದೆಹಲಿ: ಕೇರಳ ರಾಜ್ಯದಲ್ಲಿ ಭೀಕರ ಪ್ರವಾಹ ಎದುರಾಗಿದ್ದು, ರಾಜ್ಯಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹೆಚ್ಚುವರಿ ನೆರವು ನೀಡುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಗುರುವಾರ ಆಗ್ರಹಿಸಿದ್ದಾರೆ. 
ಕೇರಳ ಪ್ರವಾಹ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೇರಳದಲ್ಲಿ ಪ್ರವಾಹ ನೀರು ಹೆಚ್ಚಾಗಿದ್ದು, ಜನರ ಬಗ್ಗೆ ಹೆಚ್ಚು ಚಿಂತೆಗೀಡಾಗುವಂತೆ ಮಾಡಿದೆ. ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರ ಕೇಂದ್ರಗಳಲ್ಲಿ ಜನರು ತುಂಬಿದ್ದಾರೆ. ಹಲವಾರು ಜನರು ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡಿದ್ದಾರೆ. ಸಹಾಯ ಮಾಡಲು ಇದು ಸೂಕ್ತ ಸಮಯವಾಗಿದೆ. ಸಾರ್ವಜನಿಕರು ಪ್ರಧಾನಮಂತ್ರಿ ಪರಿಹಾರ ನಿಧಿಗೆ ಸಹಾಯ ಮಾಡಬೇಕೆಂದು ಹೇಳಿದ್ದಾರೆ. 
ಕೇರಳ ರಾಜ್ಯ ಅತೀ ದೊಡ್ಡ ನೋವಿನಲ್ಲಿದೆ. ಕೇರಳ ರಾಜ್ಯ ಪರಿಸ್ಥಿತಿ ಕುರಿತಂತೆ ಪ್ರಧಾನಮಂತ್ರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು, ಸೇನೆ ಹಾಗೂ ವಾಯುಪಡೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಯೋಜಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ. ಅಲ್ಲದೆ. ರಾಜ್ಯ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿರುವುದರಿಂದ ರಾಜ್ಯಕ್ಕೆ ವಿಶೇಷ ಆರ್ಥಿಕ ನೆರವು ನೀಡುವಂತೆಯೂ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com