ಮಹಿಳೆಯನ್ನು ಗುಂಡಿಟ್ಟು ಕೊಂದ ಉಗ್ರರು
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಯ ಶಂಕಿತ ಉಗ್ರರು ಮಹಿಳೆಯೊಬ್ಬರನ್ನು ಗುಂಡಿಟ್ಟು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪುಲ್ವಾಮ ಜಿಲ್ಲೆಯ ದ್ರುಬ್ಗಮ್ ಪ್ರದೇಶದ ನಿವಾಸಿ ಶಮೀಮಾ ಬಾನು ಹತ್ಯೆಯಾದ ಮಹಿಳೆಯೆಂದು ಹೇಳಲಾಗುತ್ತಿದೆ.
ಗುಂಡಿನ ದಾಳಿ ನಡೆಸಿದ ಬಳಿಕ ಉಗ್ರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಆದರೂ ಮಹಿಳೆ ಸಾವನ್ನಪ್ಪಿದ್ದಾರೆ.
ಮಹಿಳೆಯ ಹತ್ಯೆಯ ಹಿಂದೆ ನಿಷೇಧಿತ ಉಗ್ರ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಉಗ್ರರ ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.