ಕೇರಳದಲ್ಲಿ ಪ್ರವಾಹ ಉಂಟಾಗಿರುವುದಕ್ಕೂ, ಶಬರಿಮಲೆಯಲ್ಲಿ ಮಹಿಳೆಯರ ಪ್ರವೇಶಕ್ಕೂ ಏನಾದರೂ ಸಂಬಂಧ ಇದೆಯೇ? ಆದರೆ, ಕೆಲವು ಟ್ವೀಟರ್ ಬಳಕೆದಾರರು ಹಾಗೂ ಕೆಲ ಹಿಂದೂಪರ ಸಂಘಟನೆಗಳು ಮಾತ್ರ ‘ಮಹಿಳೆಯರು ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯವನ್ನು ಪ್ರವೇಶಿಸಲು ಬಯಸಿದ್ದರಿಂದಲೇ ಕೇರಳದಲ್ಲಿ ಪ್ರವಾಹ ಸೃಷ್ಟಿಯಾಗಿದೆ. ಅಯ್ಯಪ್ಪಸ್ವಾಮಿ ಮುನಿಸಿಕೊಂಡಿದ್ದರಿಂದ ಅನಾಹುತ ಸೃಷ್ಟಿಯಾಗಿದೆ’ ಎಂದು ವಾದಿಸಿದ್ದಾರೆ.