ಭೀಕರ ಪ್ರವಾಹಕ್ಕೆ ತುತ್ತಾದ ಕೇರಳದಲ್ಲಿ ಅಧಿಕಾರಿಗಳ ಯಡವಟ್ಟು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ನದಿಗೆ ಅಡ್ಡಲಾಗಿ ಕಟ್ಟಿದ್ದ ಸೇತುವೆ ಮೇಲೆ ಸಂಗ್ರಹವಾಗಿದ್ದ ಅಪಾರ ಪ್ರಮಾಣದ ತ್ಯಾಜ್ಯವನ್ನು ಜೆಸಿಬಿಗಳ ನೆರವಿನಿಂದಾಗಿ ಮತ್ತೆ ನದಿಗೆ ಹಾಕಲಾಗುತ್ತಿದೆ. ಸ್ಥಳೀಯರೊಬ್ಬರು ಈ ವಿಡಿಯೋವನ್ನು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ.