

ಕೇರಳ :ಶತಮಾನದಲ್ಲಿಯೇ ಅತ್ಯಂತ ಭೀಕರ ಪ್ರವಾಹದ ಹೊಡೆತಕ್ಕೆ ತುತ್ತಾಗಿರುವ ನೆರೆಯ ಕೇರಳದಲ್ಲಿ ಇಂದು ಸ್ವಲ್ಪ ಮಟ್ಟಿಗೆ ಮಳೆ ತಗ್ಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. 8 ಜಿಲ್ಲೆಗಳಲ್ಲಿ 58 ಎನ್ ಡಿಆರ್ ಎಫ್ ತಂಡಗಳನ್ನು ನಿಯೋಜಿಸಲಾಗಿದ್ದು, ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಯ ಡಿಜಿ ತಿಳಿಸಿದ್ದಾರೆ.
ಈ ತಂಡಗಳು ರಸ್ತೆ ತೆರವು ಹಾಗೂ ತುರ್ತು ವೈದ್ಯಕೀಯ ಚಿಕಿತ್ಸೆ ನೀಡುತ್ತಿದ್ದು, ಹೆಚ್ಚು ಹಾನಿಗೊಂಡಿರುವ ಪ್ರದೇಶಗಳಿಗೆ ಎನ್ ಡಿಆರ್ ಎಫ್ ತುಕಡಿಗಳನ್ನು ಸ್ಥಳಾಂತರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.